ADVERTISEMENT

ಗಿಡಗಂಟೆ ತೆರವುಗೊಳಿಸಿ

ಜಕ್ಕೂರು ಎಸ್.ನಾಗರಾಜು
Published 23 ಡಿಸೆಂಬರ್ 2013, 19:30 IST
Last Updated 23 ಡಿಸೆಂಬರ್ 2013, 19:30 IST

ಯಲಹಂಕ ದೊಡ್ಡಬಳ್ಳಾಪುರ ರಸ್ತೆಯನ್ನು ಬಿ.ಎಂ.ಎಸ್‌. ಕಾಲೇಜಿನವರೆಗೂ ಅಭಿವೃದ್ಧಿಪಡಿಸಿದ್ದು ರಸ್ತೆಯ ಎರಡೂ ಬದಿಯಲ್ಲಿ ಪಾದಚಾರಿ ಪಥಕ್ಕೆ ಟೈಲ್ಸ್ ಅಳವಡಿಸಿರುತ್ತಾರೆ. ಆದರೆ ಒಂದು ಬದಿಯ ಪಾದಚಾರಿ ರಸ್ತೆಯಲ್ಲಿ ಗಿಡ, ಬಳ್ಳಿಗಳು ಬೆಳೆದು ಜನರು ಈ ರಸ್ತೆಯಲ್ಲಿ ಸಂಚರಿಸದ ಸ್ಥಿತಿ ನಿರ್ಮಾಣವಾಗಿದೆ.

ವಾಹನಗಳು ಸಂಚರಿಸುವ ರಸ್ತೆಯಲ್ಲೇ ಓಡಾಡಬೇಕಾಗಿದೆ. ಇದರಿಂದ ರಸ್ತೆ ಅಪಘಾತಗಳಾಗುವ ಸಂಭವವಿದೆ. ಆದ್ದರಿಂದ ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳು ರಸ್ತೆಬದಿಯ ಗಿಡ–ಗಂಟೆಗಳನ್ನು ತೆರವು ಮಾಡಿ ಪಾದಚಾರಿಗಳ ಸುಗಮ ಓಡಾಟಕ್ಕೆ ಅನುವು ಮಾಡಿಕೊಡಬೇಕು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.