ADVERTISEMENT

ಗ್ರಂಥಾಲಯ ಬದಲಾಗಲಿ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2012, 19:30 IST
Last Updated 18 ಅಕ್ಟೋಬರ್ 2012, 19:30 IST

ಸಾರ್ವಜನಿಕ ಗ್ರಂಥಾಲಯ ಇಲಾಖಾ ವ್ಯಾಪ್ತಿಯಲ್ಲಿರುವ ಗ್ರಂಥಾಲಯಗಳು ಪ್ರಸ್ತುತ ಕಾಲಮಾನಕ್ಕನುಗುಣವಾಗಿ ಬದಲಾವಣೆಗೊಂಡು ಕಾರ್ಯನಿರ್ವಹಿಸ ಬೇಕಾಗಿದೆ. ಇಂದು ಉನ್ನತ ವ್ಯಾಸಂಗ ಪ್ರವೇಶ, ಉದ್ಯೋಗ ನೇಮಕಾತಿ ಸೇರಿದಂತೆ ಪ್ರತಿಯೊಂದಕ್ಕೂ ಇಂಟರ್‌ನೆಟ್ ಮೂಲಕ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ.
 
ಆದ್ದರಿಂದ ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಅಭ್ಯರ್ಥಿಗಳು ಸಿದ್ಧಗೊಳ್ಳಲು ದುಬಾರಿ ಬೆಲೆಯ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳನ್ನು ಕೊಂಡುಕೊಳ್ಳುವ ಆರ್ಥಿಕ ಸಾಮರ್ಥ್ಯ ಇರುವುದಿಲ್ಲ.

ಇಂತಹ ಅಭ್ಯರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಗ್ರಂಥಾಲಯ ಇಲಾಖೆಯೂ ಹೋಬಳಿ ಅಥವಾ ತಾಲ್ಲೂಕು ಗ್ರಂಥಾಲಯಗಳಿಗೆ ಇಂಟರ್‌ನೆಟ್ ಸಂಪರ್ಕ ಹೊಂದಿರುವ ಒಂದು ಕಂಪ್ಯೂಟರ್ ಒದಗಿಸುವುದರ ಜೊತೆಗೆ ಐ.ಎ.ಎಸ್, ಐ.ಪಿ.ಎಸ್, ಕೆ,ಎ,ಎಸ್, ಎನ್.ಇ.ಟಿ, ಬ್ಯಾಂಕಿಂಗ್, ರೈಲ್ವೆಯ ಉದ್ಯೋಗ ನೇಮಕಾತಿಗಳಿಗೆ ಸಂಬಂಧಿಸಿದಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾಗುವ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ಒದಗಿಸಲಿ.
 
ಮತ್ತು ಗ್ರಂಥಾಲಯದ ಈಗಿನ ಸಮಯವನ್ನು  ಬೆಳಿಗ್ಗೆ 8ರಿಂದ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಿದರೆ ಹೆಚ್ಚು ಅನುಕೂಲವಾಗುತ್ತದೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.