ADVERTISEMENT

ಜಿಲ್ಲಾ ಮಟ್ಟದಲ್ಲಿ ನಡೆಯಲಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2012, 19:30 IST
Last Updated 5 ಜೂನ್ 2012, 19:30 IST

ಪ್ರತಿ ವರ್ಷ ಡಿಪ್ಲೊಮಾ ಪ್ರಥಮ ವರ್ಷದ ಪ್ರವೇಶ ಕೌನ್ಸೆಲಿಂಗ್ ಆಯಾ ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿತ್ತು. ಆದರೆ ಈ ಬಾರಿ ಸರಕಾರ ಅದನ್ನು ರಾಜಧಾನಿಯಲ್ಲಿ ನಡೆಸುತ್ತಿರುವುದು ಖಂಡನಾರ್ಹ.

ಸರ್ಕಾರ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಎಂಜಿನಿಯರಿಂಗ್ ಮತ್ತು ವೈದ್ಯ ಸೀಟು ಹಂಚಿಕೆ ಪ್ರಕ್ರಿಯೆಯನ್ನು ವಿಭಾಗ ಮಟ್ಟದಲ್ಲಿ ಆರಂಭಿಸಿದೆ. ಆದರೆ ಡಿಪ್ಲೊಮಾ ಕೋರ್ಸ್ ಪ್ರವೇಶ ಪರೀಕ್ಷೆಯನ್ನು ಬೆಂಗಳೂರಲ್ಲಿ  ನಡೆಸಲು ಮುಂದಾಗಿದ್ದು ಗ್ರಾಮೀಣ ವಿದ್ಯಾರ್ಥಿಗಳ ಮೇಲೆ ಬರೆ ಎಳೆದಂತೆ ಆಗಿದೆ.

ಗ್ರಾಮೀಣ ವಿದ್ಯಾರ್ಥಿಗಳು  ದೂರದ ಬೆಂಗಳೂರಿಗೆ ಹೊಗುವುದಕ್ಕೆ ಹೇಗೆ ಸಾಧ್ಯವಾಗುತ್ತೆ? ಡೊನೇಷನ್ ಕೊಟ್ಟು ಖಾಸಗಿ ಕಾಲೇಜಿಗೆ ಸೇರಿಸಲು ಗ್ರಾಮೀಣ ಪ್ರದೇಶದ ಜನತೆಗೆ ಸಾಧ್ಯವಿಲ್ಲದ ಮಾತು. ಸರಕಾರಿ ಡಿಪ್ಲೊಮಾ ಕಾಲೇಜು ನಂಬಿ ಕುಳಿತ ವಿದ್ಯಾರ್ಥಿಗಳಿಗೆ ನಿರಾಸೆ ಆಗಿದೆ.  ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಗ್ರಾಮೀಣ ವಿದ್ಯಾರ್ಥಿಗಳ ಸಂಕಷ್ಟ ಅರಿಯಲಿ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.