ರಾಜ್ಯದಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತಿರುವ ಅಸಂಖ್ಯ ಡಿ.ಇಡಿ ತರಬೇತಿ ಸಂಸ್ಥೆಗಳು ಪ್ರತಿ ವರ್ಷ ಸಾವಿರಾರು ಶಿಕ್ಷಕರುಗಳನ್ನು ರೂಪಿಸಿ ಹೊರ ಕಳಿಸುತ್ತಿವೆ. ಹಲವು ವರ್ಷಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಆಗಿಲ್ಲ.
ಸರ್ಕಾರ ಸುಳ್ಳು ಭರವಸೆಗಳನ್ನು ನೀಡುತ್ತ ನಿರುದ್ಯೋಗಿ ಶಿಕ್ಷಕರಿಗೆ ಮೂಗಿಗೆ ತುಪ್ಪ ಹಚ್ಚುತ್ತಿದೆ.ಪ್ರೌಢಶಾಲೆ ಮತ್ತು ಪದವಿಪೂರ್ವ ಶಿಕ್ಷಕರ ನೇಮಕಾತಿಗಳ ನಡುವೆ ಡಿ.ಇಡಿ ತರಬೇತಿ ಪಡೆದ ಶಿಕ್ಷಕರ ಅಳಲು ಅರಣ್ಯರೋದನವಾಗಿದೆ. ಪ್ರಾಥಮಿಕ ಶಾಲೆಗಳಿಗೆ ಬಿ.ಇಡಿ ಪದವೀಧರರನ್ನು ನೇಮಿಸುವ ನಿರ್ಧಾರದ ಬೆದರುಬೊಂಬೆ ಡಿ.ಇಡಿ ಶಿಕ್ಷಕರ ಆತ್ಮವಿಶ್ವಾಸವನ್ನೇ ಕುಗ್ಗಿಸಿದೆ.
ಸಾವಿರಾರು ಜನರಿಗೆ ಉದ್ಯೋಗಕ್ಕೆ ಸೇರುವ ವಯೋಮಿತಿ ಮೀರುತ್ತಿದೆ. ಸರ್ಕಾರ ರಾಜಕೀಯ ಗುಂಪುಗಾರಿಕೆಯಲ್ಲಿ ತೊಡಗಿ ನಿರುದ್ಯೋಗಿಗಳನ್ನು ಮರೆತಿದೆ. ತರಬೇತಿ ಸಂಸ್ಥೆಗಳಿಗೆ ಕಡಿವಾಣ ಹಾಕುವ ಬಗ್ಗೆಯೂ ಚಿಂತಿಸುತ್ತಿಲ್ಲ.
ಸರ್ಕಾರದ ನಿರ್ಲಕ್ಷ್ಯ ಹೀಗೇ ಮುಂದುವರಿದರೆ ಡಿ.ಇಡಿ ತರಬೇತಿ ಪಡೆದ ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು. ಇನ್ನಾದರೂ ಸರ್ಕಾರ ನಿರುದ್ಯೋಗಿ ಶಿಕ್ಷಕರಿಗೆ ನ್ಯಾಯ ಒದಗಿಸಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.