ADVERTISEMENT

ದಾಳಿಂಬೆ ಬೆಳೆದ ರೈತರನ್ನು ರಕ್ಷಿಸಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2012, 19:30 IST
Last Updated 19 ಫೆಬ್ರುವರಿ 2012, 19:30 IST

ಕರ್ನಾಟಕದ 13 ಜಿಲ್ಲೆಗಳಲ್ಲಿ ಸುಮಾರು 33 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ದಾಳಿಂಬೆ ಬೆಳೆಗೆ 2004ರಲ್ಲಿ ದುಂಡಾಣು ಅಂಗಮಾರಿ ರೋಗ ತಗುಲಿ ಬೆಳೆ ಸಂಪೂರ್ಣ ನಾಶವಾಯಿತು. ಅಂದಿನಿಂದ ಇಂದಿನವರೆಗೂ ದಾಳಿಂಬೆ ರೈತರು ಆತಂಕದ ಜೀವನ ನಡೆಸುತ್ತಿದ್ದಾರೆ.

ದಾಳಿಂಬೆ ಬೆಳೆಯಲು ಎಕರೆಗೆ 50 ರಿಂದ 60 ಸಾವಿರ ರೂ ಖರ್ಚು ಮಾಡಿದ್ದರು. ಅನೇಕರು ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದಾರೆ. ಸಾಲದ ಬಡ್ಡಿಯನ್ನೂ ಅನೇಕರು ಪಾವತಿ ಮಾಡಿಲ್ಲ.

ರೋಗದ ಹಾವಳಿಯಿಂದಾಗಿ ರೈತರಿಗೆ ಸಾಲ ತೀರಿಸಲು ಸಾಧ್ಯವಾಗಿಲ್ಲ. ಸಾಲ ಮನ್ನಾ ಮಾಡಬೇಕೆಂದು ಸರ್ಕಾರಗಳಿಗೆ ರೈತರು ಮನವಿ ಸಲ್ಲಿಸುತ್ತಲೇ ಇದ್ದಾರೆ.
 
ಈ ಸಮಯದಲ್ಲೇ ಬ್ಯಾಂಕ್‌ಗಳು ರೈತರಿಗೆ ನೋಟಿಸ್ ಜಾರಿ ಮಾಡಿ, ಸಾಲದ ಕಂತು ಮತ್ತು ಬಡ್ಡಿ ತುಂಬುವಂತೆ ಒತ್ತಾಯಿಸುತ್ತಿವೆ. ಸರ್ಕಾರ ಈ ಬಜೆಟ್‌ನಲ್ಲಿ ಸಾಲ ಮನ್ನಾ ಮಾಡುವ ನಿರ್ಧಾರ ಪ್ರಕಟಿಸಿ  ನೆರವಾಗಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.