ಮುಖ್ಯಮಂತ್ರಿ ಸದಾನಂದ ಗೌಡರು ಒಂದು ಲಕ್ಷ ಕೋಟಿ ರೂಗಳ ಆಯವ್ಯಯವನ್ನು ಮಂಡಿಸಿ, ಎಲ್ಲ ವರ್ಗಗಳ ಅಭಿವೃದ್ಧಿಗೆ ಸಮಾನ ಅವಕಾಶ ಕಲ್ಪಿಸಿದ್ದೇನೆ ಎಂಬ ಆತ್ಮತೃಪ್ತಿ ನನಗಿದೆ ಎಂದು ಹೇಳಿಕೊಂಡು ಬೀಗಿದ್ದಾರೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಕಾರ್ಯ ನಿರ್ವಹಿಸು ತ್ತಿರುವ ಸುಮಾರು 17,000 ದಿನಗೂಲಿ ನೌಕರರ ಮೇಲೆ ಮುಖ್ಯಮಂತ್ರಿಗಳು ಕೃಪೆ ತೋರಿಸಿಲ್ಲ. ಅವರಿಗೆ ಕೇವಲ 1000 ರೂ ವೇತನ ಹೆಚ್ಚಿಸಿದ್ದಾರೆ. ಬೆಲೆ ಏರಿಕೆಯ ದಿನಗಳಲ್ಲಿ ಈ ಹಣ ಯಾವ ಮೂಲೆಗೆ?
ದಿನಕೂಲಿ ನೌಕರರನ್ನು ಕಾಯಂಗೊಳಿಸುವ ಬೇಡಿಕೆಯನ್ನು ಸರ್ಕಾರ ಪರಿಗಣಿಸಲು ಸಿದ್ಧವಿಲ್ಲ. ಬಹುತೇಕ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ದಿನಗೂಲಿ ನೌಕರರನ್ನು ನೇಮಕ ಮಾಡಿಕೊಳ್ಳಲು ಸಾಧ್ಯವಿದೆ. ಸದಾನಂದ ಗೌಡರು ದಿನಗೂಲಿ ನೌಕರರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿ ಸುವ ಬಗ್ಗೆ ಗಮನ ಹರಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.