ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿಗೆ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಸರ್ಕಾರವೇ ನೇಮಕ ಮಾಡಿದ್ದ ವೈದ್ಯನಾಥನ್ ಸಮಿತಿ ತನ್ನ ವರದಿಯಲ್ಲಿ ದೈಹಿಕ ಶಿಕ್ಷಣವನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಿತ್ತು.
ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2012-13ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ದೈಹಿಕ ಶಿಕ್ಷಣ ಪಠ್ಯ ಪುಸ್ತಕವನ್ನು ಬಿಡುಗಡೆಗೆ ಸಿದ್ಧತೆ ಪಡಿಸಲಾಗಿದೆ. ಈ ಪಠ್ಯಕ್ರಮವನ್ನು ಬೋಧಿಸಲು ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರೇ ಇಲ್ಲ.
ಈಗಿನ ಶಿಕ್ಷಣ ಮಂತ್ರಿಗಳಿಗೆ ಈ ಕುರಿತು 217 ಸಲ ಮನವಿ ಪತ್ರ ಸಲ್ಲಿಸಲಾಗಿದೆ. ಪ್ರತಿ ಬಾರಿಯೂ ಅವರು ಹಣಕಾಸು ಇಲಾಖೆಗೆ ಪ್ರಸ್ತಾವ ಕಳುಹಿಸಿಕೊಟ್ಟಿದ್ದೇನೆ. ನೇಮಕಾತಿಗೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳುತ್ತಲೇ ಇದ್ದಾರೆ. ದೈಹಿಕ ಶಿಕ್ಷಣ ತರಬೇತಿ ಪಡೆದ ನಿರುದ್ಯೋಗಿಗಳ ವಯೋಮಿತಿ ಮೀರುತ್ತಿದೆ. ಇನ್ನಾದರೂ ಸರ್ಕಾರ ದೈಹಿಕ ಶಿಕ್ಷಕರ ನೇಮಕಾತಿಗೆ ಮುಂದಾಗಲಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.