ADVERTISEMENT

ನಾಟಕ ಶಿಕ್ಷಕರನ್ನು ನೇಮಿಸಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2012, 19:30 IST
Last Updated 10 ಜನವರಿ 2012, 19:30 IST

ನಮ್ಮ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಚರಿತ್ರೆಗಳಲ್ಲಿ ಬರುವ ಪಾತ್ರಗಳು ಮತ್ತು ಕಥಾ ಸಾರಾಂಶವನ್ನು ಮಕ್ಕಳ ಮನಸ್ಸಿನಲ್ಲಿ ಮೂಡಿಸುವ ಮಾಧ್ಯಮ ರಂಗಭೂಮಿ.

ರಂಗ ಮಾಧ್ಯಮದಲ್ಲಿ ತರಬೇತಿ ಪಡೆದ ಪ್ರತಿಭೆಗಳನ್ನು ಸಾರ್ವಜನಿಕ ಶಿಕ್ಷಣ ಕಡೆಗಣಿಸುತ್ತಿದೆ. ಎಷ್ಟೋ ಗಣ್ಯರು ತಮ್ಮ ಭಾಷಣಗಳಲ್ಲಿ ಕಲಾವಿದರು ಬಡತನದಲ್ಲಿ ಜೀವಿಸುತ್ತಿದ್ದಾರೆ ಎಂದು ಮರುಕ ವ್ಯಕ್ತಪಡಿಸುತ್ತಾರೆಯೇ ವಿನಾ, ಸರ್ಕಾರಕ್ಕೆ ಅವರಿಗೆ ಉದ್ಯೋಗ ನೀಡಿ ಎಂದು ಶಿಫಾರಸು ಮಾಡುವುದಿಲ್ಲ. 

ರಂಗಭೂಮಿ ಜೀವಂತ ಉಳಿಯಬೇಕಾದರೆ ಶಾಲೆಗಳಲ್ಲಿ ನಾಟಕ ಶಿಕ್ಷಕರನ್ನು ನೇಮಕ ಮಾಡಿ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.