ADVERTISEMENT

ನೀತಿಸಂಹಿತೆ ನಗಣ್ಯವೇ?

ಪಿ.ಜೆ.ರಾಘವೇಂದ್ರ
Published 4 ಏಪ್ರಿಲ್ 2018, 19:30 IST
Last Updated 4 ಏಪ್ರಿಲ್ 2018, 19:30 IST

ವಿಧಾನಸಭೆ, ಲೋಕಸಭೆ, ವಿಧಾನ ಪರಿಷತ್ತು ಇತ್ಯಾದಿ ಚುನಾವಣೆಗಳ ಸಂದರ್ಭದಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗುತ್ತಲೇ ಇರುತ್ತದೆ.

ಈ ವಿಚಾರದಲ್ಲಿ ನೂರಾರು ಪ್ರಕರಣಗಳು ದಾಖಲಾಗುತ್ತಲೇ ಇರುತ್ತವೆ. ಇವುಗಳು ಸುದ್ದಿಯಾಗುತ್ತಲೇ ಇರುತ್ತವೆ. ಚುನಾವಣೆ ನೀತಿಸಂಹಿತೆ ಉಲ್ಲಂಘನೆಯಾದ ವಿಚಾರ ತಿಳಿದೊಡನೆ ಆಯಾ ವಲಯದ ಸೆಕ್ಟರಲ್ ಮ್ಯಾಜಿಸ್ಟ್ರೇಟರು ಆಯಾ ಪ್ರದೇಶದ ಪೊಲೀಸ್ ಠಾಣೆಗೆ ಮಾಹಿತಿ ನೀಡುತ್ತಾರೆ. ಆ ಮಾಹಿತಿ ಆಧಾರದ ಮೇಲೆ ಪೊಲೀಸರು ನೀತಿ
ಸಂಹಿತೆ ಉಲ್ಲಂಘಿಸಿದವರ ವಿರುದ್ಧ ನ್ಯಾಯಾಲಯಕ್ಕೆ ಎಫ್.ಐ.ಆರ್. ಸಲ್ಲಿಸುತ್ತಾರೆ. ನಂತರ ಆ ಪ್ರಕರಣಗಳಲ್ಲಿ ಯಾರ ಯಾರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು, ಯಾರು ಯಾರಿಗೆ ಶಿಕ್ಷೆಯಾಯಿತು ಎಂಬ ವಿಚಾರವಾಗಿ ಯಾವ ಸುದ್ದಿಯೂ ಪ್ರಕಟವಾಗುವುದಿಲ್ಲ.

ಪ್ರತಿಯೊಂದು ಕ್ಷೇತ್ರದಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿ ನೂರಾರು ಪ್ರಕರಣಗಳು ದಾಖಲಾಗಿದ್ದರೂ ಬೆರಳೆಣಿಕೆಯಷ್ಟು ಪ್ರಕರಣಗಳಲ್ಲಿಯೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗುತ್ತಿಲ್ಲ. ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವುದಂತೂ ಗಗನಕುಸುಮವೇ ಸರಿ! ಚುನಾವಣಾ ನೀತಿಸಂಹಿತೆ ಉಲ್ಲಂಘಿಸುವವರಿಗೆ ಶಿಕ್ಷೆ ಇಲ್ಲ ಎಂದಮೇಲೆ ಚುನಾವಣೆಗೊಂದು ‘ನೀತಿಸಂಹಿತೆ’ಯಾದರೂ ಏಕೆ ಬೇಕು?

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.