ADVERTISEMENT

ನೇಮಕಾತಿ ತಾರತಮ್ಯ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2012, 19:30 IST
Last Updated 26 ಏಪ್ರಿಲ್ 2012, 19:30 IST

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ. 15 ವಿಷಯಗಳಿಗೆ ಸಂಬಂಧಿಸಿದ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.

ಶಿಕ್ಷಣ ಶಾಸ್ತ್ರವನ್ನು ಒಂದು ವಿಷಯವನ್ನಾಗಿ ರಾಜ್ಯದ ಹಲವು ಕಾಲೇಜುಗಳಲ್ಲಿ ಕಲಿಸುವ ವ್ಯವಸ್ಥೆ ಇದೆ. ಆದರೆ ಈ ವಿಷಯಕ್ಕೆ ಸಂಬಂಧಿಸಿದಂತೆ ಉಪನ್ಯಾಸಕರ ನೇಮಕಾತಿಗೆ  ಕ್ರಮ ತೆಗೆದುಕೊಂಡಿಲ್ಲ. ಇದು ತಾರತಮ್ಯದ ನಿರ್ಧಾರ.

ಶಿಕ್ಷಣ ಶಾಸ್ತ್ರ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುತ್ತೇವೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.