ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಜೀವನದ ಜೊತೆ ಮೈಸೂರು ವಿಶ್ವ ವಿದ್ಯಾನಿಲಯ ಚೆಲ್ಲಾಟವಾಡುತ್ತಿದೆ. ಸರ್ಕಾರವು ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿರುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ಹೊರೆಯಾಗಿದೆ ಎನ್ನಬಹುದು.
ಕೆಲ ದಿನಗಳಲ್ಲಿ ಪರೀಕ್ಷೆ ಪ್ರಾರಂಭವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷಾ ಶುಲ್ಕ ಕಡಿಮೆ ಮಾಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುವುದು ಹಾಗೂ ಹೆಚ್ಚಿಗೆ ಕಟ್ಟಿರುವ ಪರೀಕ್ಷಾ ಶುಲ್ಕವನ್ನು ಹಿಂದಕ್ಕೆ ಪಡೆಯಲು ಬ್ಯಾಂಕ್‌ಗಳಲ್ಲಿ ಖಾತೆ ತೆರೆಯಬೇಕು ಎಂಬುದು ಸರ್ಕಾರದ ಆಜ್ಞೆ. ಈ ಮಧ್ಯೆ ವಿದ್ಯಾರ್ಥಿಗಳು ಕಾಲೇಜಿನಿಂದ ಬ್ಯಾಂಕಿಗೆ, ಬ್ಯಾಂಕಿನಿಂದ ಪ್ರತಿಭಟನೆಗೆ ಎಡತಾಕಬೇಕಾಗುತ್ತದೆ. ಆದ್ದರಿಂದ ಸರ್ಕಾರ ಮತ್ತು ಮೈಸೂರು ವಿಶ್ವ ವಿದ್ಯಾನಿಲಯದ ಅಧಿಕಾರಿಗಳು ಈಗಾಗಲೇ ವಿದ್ಯಾರ್ಥಿಗಳು ಕಟ್ಟಿರುವ ಹಣವನ್ನು ಆಯಾ ಕಾಲೇಜಿನ ಪ್ರಾಂಶುಪಾಲರ ಮೂಲಕ ವಿದ್ಯಾರ್ಥಿಗಳಿಗೆ ಹಿಂದಿರುಗಿಸುವ ಕೆಲಸವನ್ನು ಮಾಡಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.