ADVERTISEMENT

ಪರೀಕ್ಷೆ ವೇಳಾ ಪಟ್ಟಿ ಪರಿಷ್ಕರಿಸಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2012, 19:30 IST
Last Updated 9 ಫೆಬ್ರುವರಿ 2012, 19:30 IST

ಕರ್ನಾಟಕ ಲೋಕ ಸೇವಾ ಆಯೋಗವು  ಕಳೆದ ನವೆಂಬರ್ 3ರಂದು `ಎ~ ಮತ್ತು `ಬಿ~ (ಕೆ.ಎ.ಎಸ್.) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಅದರ ಪ್ರಕಾರ ಅಂತಿಮ ವರ್ಷದ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಪೂರ್ವಭಾವಿ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಿದೆ.
 
ಇದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಒಂದು ಸುವರ್ಣಾವಕಾಶ ಸಿಕ್ಕಂತೆ ಆಗಿದೆ.ಅದಕ್ಕಾಗಿ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಅಭಿನಂದನೆಗಳು.

ಪೂರ್ವಭಾವಿ ಪರೀಕ್ಷೆಯನ್ನು 2012ರ ಏಪ್ರಿಲ್ 22ರಂದು (ಭಾನುವಾರ) ನಡೆಸಲು ಆಯೋಗವು ನಿರ್ಧರಿಸಿದೆ. ಆದರೆ ಏಪ್ರಿಲ್ 22ರಂದು ಮುಕ್ತ ವಿಶ್ವವಿದ್ಯಾನಿಲಯದ ಅಂತಿಮ ಬಿ.ಎ. ವಿದ್ಯಾರ್ಥಿಗಳಿಗೆ  ಐಚ್ಛಿಕ ಕನ್ನಡ ಮತ್ತು ಅಂತಿಮ ಬಿ.ಕಾಂ. ವಿದ್ಯಾರ್ಥಿಗಳಿಗೆ `ಆದಾಯ ತೆರಿಗೆ ಕಾನೂನು~ ವಿಷಯದ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ.

ಏ.22ರ ರಂದು ನಡೆಸಲು ಉದ್ದೇಶಿರುವ ಪರೀಕ್ಷೆಗಳ ದಿನಾಂಕವನ್ನು ಪರಿಷ್ಕರಿಸಬೇಕೆಂದು ವಿನಂತಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.