ADVERTISEMENT

ಪಿಎಸ್‌ಐ ನೇಮಕ ಪರೀಕ್ಷೆಸಮಸ್ಯೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2012, 19:30 IST
Last Updated 20 ಫೆಬ್ರುವರಿ 2012, 19:30 IST

ಕರ್ನಾಟಕ ಪೊಲೀಸ್ ಇಲಾಖೆ ಕೆ.ಎಸ್.ಐ.ಎಸ್.ಎಫ್, ಐ.ಆರ್.ಬಿ. ಹಾಗೂ ಕೆ.ಎಸ್.ಆರ್.ಪಿ.ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ದೈಹಿಕ ಮತ್ತು ಲಿಖಿತ ಪರೀಕ್ಷೆಗಳಿವೆ.
 
ಮೂರೂ ಹುದ್ದೆಗಳಿಗೆ ಅರ್ಜಿ  ಸಲ್ಲಿಸಿದ ಅಭ್ಯರ್ಥಿಗಳು ಮೂರು ದೈಹಿಕ ಪರೀಕ್ಷೆಗಳ ಪೈಕಿ ಎರಡು ಪರೀಕ್ಷೆಗಳಿಗೆ ಹಾಜರಾಗಬೇಕು. ಇದರಲ್ಲಿ ಉತ್ತೀರ್ಣರಾದವರು ಲಿಖಿತ ಪರೀಕ್ಷೆಗೆ ಅರ್ಹರು. ಈ ಎಲ್ಲಾ ಪರೀಕ್ಷೆಗಳು ಬೆಂಗಳೂರಿನಲ್ಲಿಯೇ ನಡೆಸುವುದಾಗಿ ಇಲಾಖೆ ತಿಳಿಸಿದೆ.

ಮೂರೂ ಹ್ದ್ದುದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಗಾಗಿ ಐದು ಸಲ ಬೆಂಗಳೂರಿಗೆ ಹೋಗಿ ಬರಬೇಕಾಗುತ್ತದೆ.  ಬಿಜಾಪುರದಿಂದ ಬೆಂಗಳೂರಿಗೆ ಒಂದು ಸಲ ಹೋಗಿ ಬರಬೇಕೆಂದರೆ ಕನಿಷ್ಠ 1000 ರಿಂದ 1200 ರೂ ಬೇಕಾಗುತ್ತದೆ.

ಅಭ್ಯರ್ಥಿಗಳ ಹಿತದೃಷ್ಟಿಯಿಂದ ಉತ್ತರ ಕರ್ನಾಟಕದ ಎರಡು ಜಿಲ್ಲಾ ಕೇಂದ್ರಗಳಲ್ಲಿ ದೈಹಿಕ ಮತ್ತು ಲಿಖಿತ ಪರೀಕ್ಷೆ ನಡೆಸಿದರೆ ನೂರಾರು ಅಭ್ಯರ್ಥಿಗಳಿಗೆ ಅನುಕೂಲವಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.