ADVERTISEMENT

ಪೂರ್ವ ಪರೀಕ್ಷೆಗಳಿಂದ ಏನು ಪ್ರಯೋಜನ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2012, 19:30 IST
Last Updated 14 ಮಾರ್ಚ್ 2012, 19:30 IST

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಾಗಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸುವ ವಾಡಿಕೆ ಇದೆ. ಅದರೆ ಈ ಪರೀಕ್ಷೆ ಗಳ ಹೆಸರಿನಲ್ಲಿ ಅನವಶ್ಯಕವಾಗಿ ವಿದ್ಯಾರ್ಥಿಗಳಿಗೆ ತೊಂದರೆ ನೀಡಲಾಗುತ್ತಿದೆ. ಮೈಸೂರಿನ ಕೆಲ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಎಂಟು ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗಿದೆ. ಇಷ್ಟು ಪರೀಕ್ಷೆಗಳನ್ನು ನಡೆಸುವ ಅಗತ್ಯ ಇರಲಿಲ್ಲ. ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ನೆಪದಲ್ಲಿ ವಿದ್ಯಾರ್ಥಿಗಳಿಗೆ ಅನಗತ್ಯ ತೊಂದರೆ ಕೊಡುವುದು ಸರಿಯೇ?

ಪೂರ್ವ ಸಿದ್ಧತಾ ಪರೀಕ್ಷೆಗಳು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಕಳವಳ ಹುಟ್ಟಿಸಿವೆ. ಇವುಗಳಲ್ಲಿ ನಿರೀಕ್ಷಿಸಿದಷ್ಟು ಅಂಕಗಳನ್ನು ಪಡೆಯಲು ಆಗದ ವಿದ್ಯಾರ್ಥಿಗಳು ಹತಾಶರಾಗುವ ಸಾಧ್ಯತೆ ಇದೆ. ಇನ್ನು ಸರ್ಕಾರಿ ಶಾಲೆಗಳ ಅವಾಂತರ ಮತ್ತೊಂದು ರೀತಿಯದು. ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ ನೆಪ ಮಾತ್ರಕ್ಕೆ ವಿಶೇಷ ತರಗತಿಗಳನ್ನು ನಡೆಸುವ ಕಸರತ್ತು ನಡೆಯುತ್ತಿದೆ. 
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.