ADVERTISEMENT

ಬರ ಪರಿಹಾರದಲ್ಲಿ ತಾರತಮ್ಯ ಬೇಡ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2011, 19:30 IST
Last Updated 3 ಅಕ್ಟೋಬರ್ 2011, 19:30 IST

ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳು ಬರದ ಪರಿಸ್ಥಿತಿ ಎದುರಿಸುತ್ತಿವೆ. ಚಿತ್ರದುರ್ಗ ಜಿಲ್ಲೆಯಲ್ಲಿ ವರ್ಷಕ್ಕೆ ಸರಾಸರಿ 254.0 ಮಿ ಮೀ ಮಳೆಯಾಗಬೇಕಿತ್ತು. ಆದರೆ ಈ ವರ್ಷ 169.6 ಮಿ ಮೀ ಮಳೆಯಾಗಿದೆ. 33 ಮಿ ಮೀ ಕೊರತೆ ಇದೆ. 

ಈಗಾಗಲೇ ಮಳೆಯ ಅಭಾವದಿಂದ ಅನೇಕ ಬೆಳೆಗಳು ಒಣಗುತ್ತಿವೆ. ಅಪಾರ ಬೆಳೆ ನಷ್ಟವಾಗಿದೆ. ಇನ್ನೇನು ಕೆಲವೇ ತಿಂಗಳು ಹೀಗೆ ಮಳೆ ಕೈಕೊಟ್ಟರೆ ಈ ಜಿಲ್ಲೆಗಳಲ್ಲಿ ಕುಡಿಯಲು ಸಹ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣ ವಾಗಲಿದೆ.

ಸರ್ಕಾರ ಈಗ 5ಕೋಟಿ ಪರಿಹಾರ ಹಾಗೂ ಚಿತ್ರದುರ್ಗ ಜಿಲ್ಲೆಯ 4 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಬರಸ್ಥಿತಿಯೆ ಇದೆ. ಆದ್ದರಿಂದ ಈ ಬಗೆಗೆ ಸರ್ಕಾರ ತನ್ನ ನಿರ್ಧಾರವನ್ನು ಪುನರ್‌ಪರಿಶೀಲಿಸಿ ಉಳಿದ ತಾಲ್ಲೂಕುಗಳ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.