ADVERTISEMENT

ಬಿ.ಇಡಿ ನಿರ್ಧಾರ ಮರುಪರಿಶೀಲಿಸಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2011, 19:30 IST
Last Updated 21 ಸೆಪ್ಟೆಂಬರ್ 2011, 19:30 IST

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,765 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಬಿ.ಇಡಿ. ಕಡ್ಡಾಯಗೊಳಿಸಿರುವ ಸರ್ಕಾರದ ನಿರ್ಧಾರದಿಂದ ಹಲವು ಸ್ನಾತಕೋತ್ತರ ಪಧವೀದರರು ಉದ್ಯೋಗ ಅವಕಾಶ ಕಳೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಿ.ಇಡಿ ಮಾಡುವವರ ಸಂಖ್ಯೆ ಗಣನೀಯವಾಗಿ ಇಳಿದಿದೆ. ಕಾರಣ ಉದ್ಯೋಗ ಸಿಗುವ ಪ್ರಮಾಣ ಕಡಿಮೆಯಾಗಿದೆ. ಪದವಿ ಪೂರ್ವ ಉಪನ್ಯಾಸಕರಿಗೆ ಬೇಕಾದ ಆರ್ಹತೆ ವಿಚಾರದಲ್ಲಿ ಬಿ.ಇಡಿ. ಕಡ್ಡಾಯಗೊಳಿಸಿರುವುದರ ಉದ್ದೇಶ ಅರ್ಥವಾಗುತ್ತಿಲ್ಲ.

ಈ ನೇಮಕಾತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಅವಕಾಶ ನೀಡಿ, ಉಳಿದ ಪದವಿ ಪಡೆದಿದ್ದರೆ ಅಭ್ಯಂತರವೇನು ಇರುವುದಿಲ್ಲ. ಕೆಲವರು ಸ್ನಾತಕೋತ್ತರ ಪದವಿ ಪಡೆದು, ಬಿ.ಇಡಿ, ಎಂ.ಫಿಲ್, ನೆಟ್, ಸ್ಲೆಟ್ ಪಡೆದವರು ಇರುತ್ತಾರೆ. ಈ ಬಗೆಗೆ ತನ್ನ ಈಗಿನ ನಿರ್ಧಾರವನ್ನು ಮರುಪರಿಶೀಲಿಸಿ ಸಾಧಕ-ಬಾಧಕಗಳನ್ನು ಚರ್ಚಿಸಿ ಎಲ್ಲರಿಗೂ ಅವಕಾಶ ನೀಡಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.