
ಪ್ರಜಾವಾಣಿ ವಾರ್ತೆಬನ್ನೇರುಘಟ್ಟ ರಸ್ತೆಯ ಮೀನಾಕ್ಷಿ ಮಾಲ್‌ನಿಂದ ಹುಳಿಮಾವು ಬಸ್ ನಿಲ್ದಾಣದ ವರೆಗೂ ಪೊಲೀಸ್ ಠಾಣಾ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದೆ ಕಾರ್ಗತ್ತಲು ಇದೆ. ಇದರಿಂದ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳು ನಡೆದು ಹೋಗುವುದಕ್ಕೆ ತುಂಬಾ ತೊಂದರೆಯಾಗಿದೆ.
ಅಲ್ಲದೆ ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಳು, ಪೊದೆಗಳು ಇರುವುದರಿಂದ ವಿಷ ಜಂತುಗಳ ಸಂಚಾರದಿಂದ ಪಾದಚಾರಿಗಳಿಗೆ ಅಪಾಯವಿದೆ. ಆದ್ದರಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಈ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಲು ಮನವಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.