ADVERTISEMENT

ಭೂಮಿ ಸ್ವಾಧೀನ ಬೇಡ

​ಪ್ರಜಾವಾಣಿ ವಾರ್ತೆ
Published 16 ಜನವರಿ 2012, 19:30 IST
Last Updated 16 ಜನವರಿ 2012, 19:30 IST

ಬಳ್ಳಾರಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ವಿಮಾನ ನಿಲ್ದಾಣ ಸ್ಥಾಪನೆಗಾಗಿ ರೈತರ ನೀರಾವರಿ ಭೂಮಿಯನ್ನು ವಶಪಡಿಸಿಕೊಂಡ ಕ್ರಮವನ್ನು ಕಾನೂನುಬಾಹಿರ ಎಂದು ರಾಜ್ಯ ಹೈಕೋರ್ಟ್ ತಳ್ಳಿಹಾಕಿದ ಕ್ರಮ ಸ್ವಾಗತಾರ್ಹ. ಫಲವತ್ತಾದ ಭೂಮಿಯನ್ನು ವಶಪಡಿಸಿಕೊಂಡು ರೈತರ ಕುಟುಂಬಗಳನ್ನು ಬೀದಿ ಪಾಲು ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಇನ್ನಾದರೂ ಕೈಬಿಡಬೇಕು.

ಪ್ರತಿಯೊಂದು ರಾಜಕೀಯ ಪಕ್ಷವೂ ರೈತಪರ ಎಂದು ಹೇಳಿಕೊಂಡೇ ಅಧಿಕಾರಕ್ಕೆ ಬರುತ್ತದೆ. ಅಧಿಕಾರಕ್ಕೆ ಬಂದ ಮೇಲೆ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಯೋಜನೆ ಹಾಕಿಕೊಳ್ಳುತ್ತದೆ.
 
ಬಳ್ಳಾರಿ ರೈತರ ಭೂ ಸ್ವಾಧೀನ ಕೈಬಿಟ್ಟ ಹೈಕೋರ್ಟಿನ ಆದೇಶ ಪರಿಗಣಿಸಿ ಸರ್ಕಾರ ಈಗಾಗಲೇ ವಶಪಡಿಸಿಕೊಂಡು ಭೂಮಿಯನ್ನು ಅವರಿಗೆ ಹಿಂದಿರುಗಿಸಬೇಕು. ಭೂಸ್ವಾಧಿನದ ವಿರುದ್ಧ ನಡೆದ ಚಳವಳಿ ಸಂದರ್ಭದಲ್ಲಿ ರೈತರ ಮೇಲೆ ಹಾಕಿದ  ಮೊಕದ್ದಮೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.