ADVERTISEMENT

ಮಠಾಧಿಪತಿಗಳ ಶಕ್ತಿ ಪ್ರದರ್ಶನ!

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 19:30 IST
Last Updated 15 ಮಾರ್ಚ್ 2012, 19:30 IST

ಬಜೆಟ್ ಮಂಡನೆ ಹಿನ್ನೆಲೆಯಲ್ಲಿ  ರಾಜ್ಯದ ಹಿಂದುಳಿದ ಹಾಗೂ ದಲಿತ ವರ್ಗಗಳ ಮಠಾಧೀಶರು, ಮುಖ್ಯಮಂತ್ರಿ ಸದಾನಂದ ಗೌಡರನ್ನು ಭೇಟಿಯಾಗಿ ಹಿಂದುಳಿದ ಮತ್ತು ದಲಿತವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದಾರೆ.
 
ಹಿಂದುಳಿದ ಮತ್ತು ದಲಿತ ವರ್ಗಗಳ ಅಭಿವೃದ್ಧಿ, ಯಾವುದೇ ಸರ್ಕಾರದ ಸಂವಿಧಾನಾತ್ಮಕ ಕರ್ತವ್ಯ ಆಗಿರುವುದರಿಂದ ಅದಕ್ಕಾಗಿ ಮಠಾಧಿಪತಿಗಳು ಮನವಿ ಸಲ್ಲಿಸುವ ಅಗತ್ಯ ಇರಲಿಲ್ಲ. ಈ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡುವುದು ಸರ್ಕಾರದ ಕರ್ತವ್ಯವೇ ಆಗಿದೆ.

ಕರ್ನಾಟಕದ ಪ್ರಸ್ತುತ ರಾಜಕೀಯ ಸಂದರ್ಭ ಮಠಾಧೀಶರ ಶಕ್ತಿ ಪ್ರದರ್ಶನದ ರಂಗವಾಗಿದೆ. ಈ ಬೆಳವಣಿಗೆಯನ್ನು ರಾಜ್ಯದ ಪ್ರಜ್ಞಾವಂತರು ಖಂಡಿತಾ ಮೆಚ್ಚುವುದಿಲ್ಲ. ಹಿಂದುಳಿದ ಮತ್ತು ದಲಿತ ವರ್ಗಗಳ ಮಠಾಧೀಶರ ಈ ಬಗೆಯ ಶಕ್ತಿ ಪ್ರದರ್ಶನ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ನಡೆಸುತ್ತಿರುವ ಲಿಂಗಾಯತ ಮಠಾಧೀಶರ ಶಕ್ತಿ ಪ್ರದರ್ಶನಕ್ಕೆ ಪ್ರತ್ಯುತ್ತರ ಎಂಬುದು ನಿಸ್ಸಂದೇಹ.

ಆದರೆ ಜಾತಿ ರಾಜಕೀಯದ ಶಕ್ತಿ ಪ್ರದರ್ಶನಕ್ಕೆ ಮಠಾಧೀಶರನ್ನು ಬಳಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ ಮತ್ತು ನಾಚಿಕೆಗೇಡಿನ ಬೆಳವಣಿಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.