ADVERTISEMENT

ಮಾಲಿನ್ಯ ನೀಗಿಸಿ

​ಪ್ರಜಾವಾಣಿ ವಾರ್ತೆ
Published 17 ಜನವರಿ 2017, 19:30 IST
Last Updated 17 ಜನವರಿ 2017, 19:30 IST

ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ಕಂಡು ದೇಶದ ಜನ ತೀವ್ರ ಕಳವಳಕ್ಕೀಡಾಗಿದ್ದರು. ಇದೀಗ ಕರ್ನಾಟಕದ ಹೃದಯ ಭಾಗವಾದ ದಾವಣಗೆರೆ, ರಾಜಧಾನಿಗೆ ಸಮೀಪದ ತುಮಕೂರು, ಉತ್ತರ ಕರ್ನಾಟಕದ ಹುಬ್ಬಳ್ಳಿ, ರಾಯಚೂರು ನಗರಗಳಲ್ಲಿ ವಾಯುಮಾಲಿನ್ಯ ಮಿತಿ ಮೀರಿರುವ ವರದಿ ನೋಡಿ (ಪ್ರ.ವಾ., ಜ. 11) ಇನ್ನಷ್ಟು ಆತಂಕವಾಗಿದೆ.

ದೆಹಲಿಯ ವಾಯುಮಾಲಿನ್ಯಕ್ಕೆ ಪರಿಹಾರವಾಗಿ ಸಮ- ಬೆಸ ಸಂಖ್ಯೆಯ ವಾಹನ ಸಂಚಾರ ನಿಯಮ ಪ್ರಾಯೋಗಿಕವಾಗಿ ಜಾರಿಗೆ ಬಂದಿತ್ತು. ಆದರೆ ನಮ್ಮ ಸರ್ಕಾರ ಯಾವ ಪರಿಹಾರ ಸೂತ್ರ ರೂಪಿಸಲಿದೆ?  ಕೆಲವು ಬೃಹತ್‌ ನಗರಗಳಿಗೆ ಹೋಲಿಸಿದರೆ ನಮ್ಮ ಈ ನಗರಗಳಲ್ಲಿ ಜನಸಂಖ್ಯೆ, ವ್ಯಾಪ್ತಿ ಮತ್ತು ವಾಹನಗಳ ಸಂಖ್ಯೆ ಕಡಿಮೆ ಇದೆ. ಆದರೂ ವಾಯುಮಾಲಿನ್ಯ ವಿಪರೀತವಾಗಿ ಹೆಚ್ಚಿರುವುದಕ್ಕೆ ಸೂಕ್ತ ಕಾರಣಗಳನ್ನು ಗುರುತಿಸಬೇಕು. ಅದಕ್ಕೆ ತಕ್ಕಂತೆ ಸರ್ಕಾರ ಜನರ ಸಹಭಾಗಿತ್ವದಲ್ಲಿ ಈ ಗಂಭೀರ ಸಮಸ್ಯೆಯನ್ನು ನಿವಾರಿಸಲು ಮುಂದಡಿ ಇಡಬೇಕು.
-ಫಾಜಿಲ್ ಅಹ್ಮದ್ ಹೊದಿಗೆರೆ, ಹರಿಹರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.