ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಅಗತ್ಯವಾದುದರಿಂದ ರಾಜಕೀಯ ಪಕ್ಷಗಳನ್ನು ಸ್ಥಾಪಿಸಲಾಗುತ್ತಿದೆ. ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಅಧಿಕಾರಕ್ಕೆ ಬರುತ್ತವೆ. ಪ್ರಜೆಗಳಿಂದ, ಉದ್ಯಮಪತಿಗಳಿಂದ ಅವು ಕೋಟಿಗಟ್ಟಲೆ ಹಣ ಸಂಗ್ರಹಿಸುತ್ತವೆ.
ಪಕ್ಷ ಒಬ್ಬ ವ್ಯಕ್ತಿಯ ಆಸ್ತಿಯಲ್ಲ. ಅವುಗಳಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ತರುವ ಉತ್ತಮ ಉದ್ದೇಶದಿಂದ, ಅವು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಸೇರಬೇಕು ಎಂಬ ಕೇಂದ್ರ ಮಾಹಿತಿ ಆಯೋಗದ ಆದೇಶದಲ್ಲಿ ಅರ್ಥವಿದೆ. ವಿವೇಕ, ವಿವೇಚನೆ ಇದೆ. ಭ್ರಷ್ಟಾಚಾರ ನಿರ್ಮೂಲನಕ್ಕೆ ನೆರವಾಗುವ ಆಯೋಗದ ಆದೇಶವನ್ನು ರಾಜಕೀಯ ಪಕ್ಷಗಳು ವಿರೋಧಿಸಬಾರದು. ಸ್ವಾಗತಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.