ಮೂರನೇ ತರಗತಿಯಲ್ಲಿ ಓದುತ್ತಿದ್ದ ನನ್ನ ಮಗಳು ಅಂಜನಾ (9) ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾಳೆ. ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಓಂಕಾಲಜಿಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೇನೆ. ಆರು ತಿಂಗಳು ಕಿಮೋಥೆರಪಿ ಮತ್ತು ಎರಡು ವರ್ಷದವರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅಂದಾಜು ಹತ್ತು ಲಕ್ಷ ರೂಪಾಯಿವರೆಗೆ ವೆಚ್ಚವಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಿಟಿ ಮಾರುಕಟ್ಟೆಯಲ್ಲಿ ದಿನಗೂಲಿಯಾಗಿ ಕೆಲಸ ಮಾಡುತ್ತಿರುವ ನನಗೆ ಇಷ್ಟು ಹಣವನ್ನು ಒದಗಿಸುವ ಶಕ್ತಿ ಇಲ್ಲ. ದಯವಿಟ್ಟು ಮಗಳ ಚಿಕಿತ್ಸೆಗೆ ನೆರವಾಗಿ- ಮಿಷನ್ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಖಾತೆ ನಂ. 20074738667 ಗೆ ಹಣ ಪಾವತಿಸುವಂತೆ ಕೋರುತ್ತೇನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.