ADVERTISEMENT

ರಾಜಕೀಯ ಪಕ್ಷಗಳಿಗೆ ಕಡಿವಾಣ

ಆರ್.ಎಸ್.ಅಯ್ಯರ್
Published 4 ಜೂನ್ 2013, 19:59 IST
Last Updated 4 ಜೂನ್ 2013, 19:59 IST

ಈಗಾಗಲೇ ಚುನಾವಣಾ ಆಯೋಗದ ಬಿಗಿ ಕ್ರಮಗಳಿಂದಾಗಿ ದೇಶದ ಚುನಾವಣಾ ವ್ಯವಸ್ಥೆಯಲ್ಲಿ  ಸಾಕಷ್ಟು ಸುಧಾರಣೆಗಳು ಕಾಣುತ್ತಿರುವ ಬೆನ್ನಲ್ಲೇ, ಕೇಂದ್ರ ಮಾಹಿತಿ ಆಯೋಗವು ರಾಜಕೀಯ ಪಕ್ಷಗಳನ್ನೂ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಒಳಪಡಿಸಿರುವುದು ಸ್ವಾಗತಾರ್ಹ.

ಕಪ್ಪು-ಬಿಳಿ ಹಣದ ಆಟದಲ್ಲಿ ಲಂಗುಲಗಾಮಿಲ್ಲದೆ ವ್ಯವಹರಿಸುತ್ತಿರುವ ರಾಜಕೀಯ ಪಕ್ಷಗಳಿಗೆ ಕೇಂದ್ರ ಮಾಹಿತಿ ಆಯೋಗದ ಈ ಮಹತ್ವದ ತೀರ್ಪು ಅಕ್ಷರಶಃ ಕಡಿವಾಣ ಹಾಕಿದಂತಾಗಲಿದೆ.ರಾಜಕೀಯ ಪಕ್ಷಗಳ ವ್ಯವಹಾರ ನಿಜಕ್ಕೂ ನಿಗೂಢವಾಗಿ ಉಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಮಾಹಿತಿ ಆಯೋಗದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಆರೋಗ್ಯಪೂರ್ಣಗೊಳಿಸುವ ನಿಟ್ಟಿನಲ್ಲಿ ಆಶಾದಾಯಕ ಬೆಳವಣಿಗೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.