ನಗರದ ಎಲ್ಲ ಕಡೆಯೂ ಆಧಾರ್‌ಕೇಂದ್ರಗಳನ್ನು ತೆರೆಯಲಾಗಿದೆ. ಆದರೆ ರಾಮಮೂರ್ತಿ ನಗರದಲ್ಲಿ ಇದುವರೆಗೆ ಒಂದೂ `ಆಧಾರ್ ಕಾರ್ಡ್' ನೋಂದಣಿ ಕೇಂದ್ರ ತೆರೆದಿಲ್ಲ. ಇಲ್ಲಿನ ನಿವಾಸಿಗಳು ಬೇರೆ ಕಡೆ ಹೋಗಿ ಕಾರ್ಡ್ ಮಾಡಿಸುತ್ತಿದ್ದಾರೆ.
ಅನೇಕರು ಇನ್ನೂ ಆಧಾರ್ ಕಾರ್ಡ್ ಮಾಡಿಸಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ವಿತರಣೆಯ ಹೊಣೆ ಹೊತ್ತ ಅಧಿಕಾರಿಗಳು ಕೇಂದ್ರವನ್ನು ತೆರೆಯಲು ಕ್ರಮ ಕೈಗೊಳ್ಳಬೇಕಾಗಿ ಮನವಿ.
-ರಾಮಮೂರ್ತಿನಗರ ಕ್ಷೇಮಾಭಿವೃದ್ಧಿ ಸಂಘ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.