ಕಳೆದ ವರ್ಷ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಬಜೆಟ್‌ನಲ್ಲಿ ಲಲಿತಕಲಾ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಎರಡು ಕೋಟಿ ಹಣ ಮೀಸಲಿಟ್ಟಿದ್ದರು. ಆದರೆ, ವರ್ಷ ಕಳೆದರೂ ವಿಶ್ವವಿದ್ಯಾಲಯ ಸ್ಥಾಪನೆ ಕಾರ್ಯ ಇನ್ನೂ ಆರಂಭವಾಗಿಲ್ಲ. ಜಾನಪದ ಮತ್ತು ಸಂಗೀತ ವಿಶ್ವವಿದ್ಯಾಲಯಗಳಂತೆ ಚಿತ್ರಕಲೆ ಮತ್ತು ಶಿಲ್ಪಕಲೆ ಇನ್ನಿತರ ಹಲವು ಕಲೆಗಳನ್ನು ಕ್ರೋಡೀಕರಿಸಿ ಅವುಗಳ ಸಮಗ್ರ ಬೆಳವಣಿಗೆಗಾಗಿ ಲಲಿತಕಲಾ ವಿಶ್ವವಿದ್ಯಾಲಯದ ಸ್ಥಾಪನೆ ಅವಶ್ಯಕತೆ ಇದೆ.
ಅದಷ್ಟು ಬೇಗ ಸರ್ಕಾರ ಸೂಕ್ತವಾದ ಸ್ಥಳದಲ್ಲಿ ನೂತನ ಕುಲಪತಿಗಳನ್ನು ನೇಮಿಸಿ ವಿಶ್ವವಿದ್ಯಾಲಯವನ್ನು ಅಸ್ತಿತ್ವಕ್ಕೆ ತರಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.