ADVERTISEMENT

ವರ್ಗಾವಣೆ ಯಾವಾಗ?

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 19:30 IST
Last Updated 25 ಅಕ್ಟೋಬರ್ 2017, 19:30 IST

ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ವರ್ಗಾವಣೆ ನಿಯಮಕ್ಕೆ ತಿದ್ದುಪಡಿ ತರುವ ಮೂಲಕ ಸಾಕಷ್ಟು ಬದಲಾವಣೆಗಳನ್ನು ಮಾಡಿದೆ. ಆದರೆ, ಈವರೆಗೂ ಇಲಾಖೆಯು ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿಲ್ಲ. ಆಗ– ಈಗ ಎಂದು ಸತಾಯಿಸುತ್ತಲೇ ಅರ್ಧ ವರ್ಷ ಕಳೆದು ಹೋಗಿದೆ. ನವೆಂಬರ್ ತಿಂಗಳಿನಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭವಾದರೂ, ಮುಗಿಯಲು ಕನಿಷ್ಠ ನಾಲ್ಕು ತಿಂಗಳಾದರೂ ಬೇಕು. ಅಷ್ಟರೊಳಗೆ ವಿಧಾನಸಭೆ ಚುನಾವಣೆ ಘೋಷಣೆಯಾದರೆ ಎಲ್ಲವೂ ಸ್ಥಗಿತಗೊಳ್ಳಬಹುದೆಂಬ ಭಯ ಶಿಕ್ಷಕರಲ್ಲಿ ಆವರಿಸಿದೆ.

‘ಶಿಕ್ಷಕರನ್ನು ಈಗಲೇ ವರ್ಗಾವಣೆ ಮಾಡಿದರೂ ಶೈಕ್ಷಣಿಕ ಚಟುವಟಿಕೆ ಮೇಲೆ ಯಾವುದೇ ಪರಿಣಾಮ ಆಗದು, ವರ್ಗಾವಣೆಗೊಂಡ ಶಿಕ್ಷಕರನ್ನು ಏಪ್ರಿಲ್‌ನಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಈಗಾಗಲೇ ಮಂತ್ರಿಗಳು ಹೇಳಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಈಗಲೇ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಬೇಕು. ಆ ಮೂಲಕ ಶಿಕ್ಷಕರು ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು.

–ಪ್ರಹ್ಲಾದ್ ವಾ. ಪತ್ತಾರ, ಯಡ್ರಾಮಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.