ADVERTISEMENT

ವಸತಿ ಶಾಲೆ: ಶಿಕ್ಷಣ ಇಲಾಖೆಗೆ ಸೇರಿಸಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2012, 19:30 IST
Last Updated 11 ಏಪ್ರಿಲ್ 2012, 19:30 IST

ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ವಾಜಪೇಯಿ ಶಾಲೆ ಮಾದರಿಯ ಹದಿನಾಲ್ಕು ವಸತಿ ಶಾಲೆಗಳನ್ನು ಪ್ರಾರಂಭಿಸುವುದಾಗಿ ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಮಂತ್ರಿ ಎ. ನಾರಾಯಣ ಸ್ವಾಮಿ ಹೇಳಿದ್ದಾರೆ.
 
ರಾಜ್ಯದಲ್ಲಿ ಈಗ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಮಾದರಿ ವಸತಿ ಶಾಲೆಗಳಿವೆ. ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಬಂದು ನಿಂತಿವೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಿಂದ ನಡೆಸುವ ಇಂತಹ ವಸತಿ ಶಾಲೆಗಳಿಗೆ, ಸರ್ಕಾರಿ ಪ್ರಾಥಮಿಕ ಶಾಲೆ ಗಳಲ್ಲಿ ಕಲಿಯುತ್ತಿರುವ 5ನೇ ತರಗತಿ ಪಾಸಾದ ವಿದ್ಯಾರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಿ ಅವರನ್ನು ಈ ವಸತಿ ಶಾಲೆಗಳಿಗೆ ಪ್ರವೇಶ ಮಾಡಿಕೊಳ್ಳುತ್ತಾರೆ. ಇದರಿಂದ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಕೊರತೆ ಆಗುತ್ತಿದೆ.

ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸುತ್ತಿರುವ ಎಲ್ಲಾ ಶಾಲೆಗಳನ್ನು, ಶಿಕ್ಷಣ ಇಲಾಖೆಯ ಅಧೀನಕ್ಕೆ ಒಳ ಪಡಿಸುವ ಅಗತ್ಯವಿದೆ. ಗ್ರಾಮಾಂತರ ಪ್ರದೇಶಗಳ ಸರ್ಕಾರಿ ಶಾಲೆಗಳನ್ನು ವಸತಿ ಮಾದರಿ ಶಾಲೆಗಳಾಗಿ ಪರಿವರ್ತಿಸುವತ್ತ ಸರ್ಕಾರ ಚಿಂತಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT