
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಹೃದಯ ಭಾಗದಲ್ಲಿ ಸರ್ಕಾರದ ಅಧೀನದ ಸಾರ್ವಜನಿಕ ವಾಚನಾಲಯ ಇದೆ. ನನ್ನ ಹುಟ್ಟೂ-ರಾದ ಚಿಂತಾಮಣಿಗೆ ಇತ್ತೀಚೆಗೆ ಹೋಗಿದ್ದಾಗ, ವಾಚನಾಲಯಕ್ಕೆ ಹೋಗಿದ್ದೆ. ಅಲ್ಲಿ ದಿನಪತ್ರಿಕೆಗಳು ಮಾತ್ರ ಇದ್ದುದನ್ನು ಕಂಡು ಅಚ್ಚರಿಯಾಯಿತು.
ಚಿಂತಾಮಣಿಯಲ್ಲಿ ಅನೇಕ ಶೈಕ್ಷಣಿಕ ಸಂಸ್ಥೆಗಳಿವೆ. ವಿದ್ಯಾರ್ಥಿಗಳು ನಿಯತಕಾಲಿಕೆಗಳ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ಎಲ್ಲಾ ಭಾಷೆಗಳ ನಿಯತಕಾಲಿಕೆಗಳು ಲಭ್ಯವಾಗುವಂತೆ ಮಾಡಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.