ADVERTISEMENT

ವಿಜ್ಞಾನ ಶಿಕ್ಷಕರನ್ನು ನೇಮಿಸಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2012, 19:30 IST
Last Updated 8 ಜನವರಿ 2012, 19:30 IST

ಮಕ್ಕಳ ಕೊರತೆಯಿಂದ ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದಿರುವುದು ಸಮಾಧಾನಕರ ಸಂಗತಿ. ಈಗ ಪ್ರಾಥಮಿಕ ಶಾಲಾ ಶಿಕ್ಷಣದ ಗುಣಮಟ್ಟದ ಬಗ್ಗೆ ಚರ್ಚೆ ನಡೆಯುತ್ತಿದೆ.

ಲೇಖಕರಾದ ಜಿ.ಎಸ್. ಜಯದೇವ ಅವರು ತಮ್ಮ ಅಂಕಣದಲ್ಲಿ ( ಪ್ರವಾ ಡಿ.22) ಸರ್ಕಾರಿ ಶಾಲೆಗಳನ್ನು ಉಳಿಸಲು ಗುಣಮಟ್ಟದ ಶಿಕ್ಷಣವೇ ಪರಿಹಾರ ಎಂದು ಪ್ರತಿಪಾದಿಸಿದ್ದಾರೆ.

ಆದರೆ ಈಗ ಬಹುತೇಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಗಣಿತ, ವಿಜ್ಞಾನ ವಿಷಯಗಳನ್ನು ಬೋಧಿಸಲು ವಿಜ್ಞಾನ ಹಿನ್ನೆಲೆಯಿಂದ ಬಂದ ಅಧ್ಯಾಪಕರೇ ಇಲ್ಲ. ಆದರೆ ಪಿಯುಸಿಯಲ್ಲಿ  ವಿಜ್ಞಾನವನ್ನು ಅಭ್ಯಾಸ ಮಾಡಿದ ಡಿ.ಇಡಿ ಪದವೀಧರರು ಕೆಲಸವಿಲ್ಲದ ನಿರುದ್ಯೋಗಿಗಳಿದ್ದಾರೆ. ಅವರನ್ನು ಕನ್ನಡ ಪ್ರಾಥಮಿಕ ಶಾಲೆಗಳಿಗೆ ವಿಜ್ಞಾನ ಶಿಕ್ಷಕರನ್ನಾಗಿ ನೇಮಕ ಮಾಡಿಕೊಂಡರೆ ಸಮಸ್ಯೆಗೆ ಪರಿಹಾರ ಸಿಗುತ್ತದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.