ADVERTISEMENT

ಶಿಕ್ಷಕರಿಗೂ ಮತದಾನದ ಹಕ್ಕು ನೀಡಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2011, 19:30 IST
Last Updated 14 ಜೂನ್ 2011, 19:30 IST

ಕರ್ನಾಟಕದ ವಿಧಾನಪರಿಷತ್ ಸದಸ್ಯರನ್ನು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಮಾಡುವಾಗ, ಕೇವಲ ಪ್ರೌಢಶಾಲಾ ಶಿಕ್ಷಕರುಗಳು ಹಾಗೂ ಪದವಿ ಪೂರ್ವ ಕಾಲೇಜು ಶಿಕ್ಷಕರುಗಳಿಗೆ ಮಾತ್ರ ಮತ ಚಲಾಯಿಸುವ ಹಕ್ಕನ್ನು ನೀಡಲಾಗಿದೆ.

ಆದ್ದರಿಂದ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಎಂ.ಎಲ್.ಸಿ.ಗಳು ಪ್ರೌಢಶಾಲೆ, ಹಾಗೂ ಪದವಿಪೂರ್ವ ಕಾಲೇಜು ಶಿಕ್ಷಕರ ಸಮಸ್ಯೆಗಳಿಗೆ ಮಾತ್ರ ಸ್ಪಂದಿಸುತ್ತಾರೆ. ಆದ್ದರಿಂದ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೂ ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಗಳನ್ನು ಆಯ್ಕೆಮಾಡಲು ಮತದಾನದ ಹಕ್ಕನ್ನು ನೀಡಬೇಕಾಗಿ ವಿನಂತಿ. ಸರ್ಕಾರ ಇತ್ತ ಗಮನಹರಿಸಲಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.