ADVERTISEMENT

ಶಿಕ್ಷಕರ ಜವಾಬ್ದಾರಿ ದೊಡ್ಡದು

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2012, 19:30 IST
Last Updated 25 ಏಪ್ರಿಲ್ 2012, 19:30 IST

ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಶಾಲೆಯ ಸೌಲಭ್ಯಗಳನ್ನು ಹೆಚ್ಚಿಸುತ್ತಿದೆ. ಒಂದನೇ ತರಗತಿಯಿಂದಲೇ ಇಂಗ್ಲಿಷ್ ಭಾಷೆ ಬೋಧನೆಗೆ ಅವಕಾಶ ನೀಡಿದೆ. ಆದರೆ ಹೆಚ್ಚಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗಿನ ಮಕ್ಕಳಿಗೆ ಇಂಗ್ಲಿಷ್ ಕಲಿಸುತ್ತಿಲ್ಲ.  ಗಣಿತವನ್ನೂ ಸರಿಯಾಗಿ  ಹೇಳಿಕೊಡುತ್ತಿಲ್ಲ. ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಗಣಿತ ಮತ್ತು ಇಂಗ್ಲಿಷ್ ಮೇಲೆ ಹಿಡಿತ ಸಾಧ್ಯವಾಗುತ್ತಿಲ್ಲ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಹಾಜರಾತಿ ಬಗ್ಗೆ ದೂರುಗಳಿವೆ. ಸರ್ಕಾರ ಎಷ್ಟೇ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವನ್ನು ಅನುಷ್ಠಾನ ಮಾಡಬೇಕಾದವರು ಶಿಕ್ಷಕರೇ. ಆದ್ದರಿಂದ ಸರ್ಕಾರಿ ಶಾಲೆಗಳು ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಬೇಕಾದರೆ ಅದಕ್ಕೆ ಶಿಕ್ಷಕರ ಪರಿಶ್ರಮ ಅಗತ್ಯ. ಸರ್ಕಾರಿ ಶಾಲೆಗಳು ಯಶಸ್ವಿಯಾಗುವುದು ಶಿಕ್ಷಕರನ್ನು ಅವಲಂಬಿಸಿದೆ.

ಉತ್ತಮ ಶಿಕ್ಷಕರನ್ನು ನೇಮಕ ಮಾಡಿಕೊಂಡು ಅವರಿಗೆ ಸೂಕ್ತ ತರಬೇತಿ ನೀಡಿ ಅವರ ಕಾರ್ಯಕ್ಷಮತೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸೂಕ್ತ ಕಾರ್ಯಕ್ರಮಗಳನ್ನು ರೂಪಿಸುವ ಜವಾಬ್ದಾರಿ ಸರ್ಕಾರದ್ದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.