ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು  ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇಲ್ಲ, 3650 ಉಪನ್ಯಾಸಕರು ಹಾಗೂ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ಒಂದು ವಾರದೊಳಗೆ ಪ್ರಕಟಣೆ ಹೊರಡಿಸುವುದಾಗಿ ಇತ್ತೀಚೆಗೆ ಹೇಳಿದ್ದರು.
 
ಈ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸ ಮಾಡುವಾಗ 8,000 ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬರುವ ಶೈಕ್ಷಣಿಕ ವರ್ಷದೊಳಗೆ ನೇಮಕ ಮಾಡಿಕೊಳ್ಳುವುದಾಗಿ ಹೇಳಿದ್ದರು.
 
ಕಳೆದ ಫೆಬ್ರುವರಿ 27ರಂದು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಹಣಕಾಸು ಇಲಾಖೆಗೆ ಒಂದು ವರ್ಷದ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿದ್ದೇವೆ ಇಲಾಖೆ ಒಪ್ಪಿಗೆ ನೀಡಿದ ಕೂಡಲೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡುತ್ತೇವೆ ಎಂದು ಹೇಳಿದ್ದರು. ಈ ಹೇಳಿಕೆಗಳಲ್ಲಿ ಯಾವುದು ನಿಜ?
ಸಚಿವರ ಶೈಕ್ಷಣಿಕ  ಕಾಳಜಿಯ ಬಗ್ಗೆಯೇ ಅನುಮಾನ ಉಂಟಾಗುತ್ತದೆ. ನೇಮಕಾತಿ ಬಗ್ಗೆ ವಿಭಿನ್ನ ಹೇಳಿಕೆ ಕೊಡುತ್ತ ನಿರುದ್ಯೋಗಿಗಳ ಮೂಗಿಗೆ ತುಪ್ಪ ಹಚ್ಚುತ್ತಿದ್ದಾರೆ. ಅವರ ಮಾತು ನಂಬಿಕೊಂಡ ನಿರುದ್ಯೋಗಿಗಳು ಭರವಸೆಯನ್ನೇ ಕಳೆದುಕೊಂಡಿದ್ದಾರೆ. ಇನ್ನಾದರೂ ಸಚಿವರು ಜವಾಬ್ದಾರಿಯಿಂದ ಹೇಳಿಕೆ ನೀಡಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.