ADVERTISEMENT

ಶಿಕ್ಷಣ ಸಚಿವರ ಗಮನ ಹರಿಸಲಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2012, 19:30 IST
Last Updated 1 ಮಾರ್ಚ್ 2012, 19:30 IST

ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗಿದೆ ಎಂಬ ನೆಪ ಹೇಳಿ ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಯತ್ನಗಳನ್ನು ಸರ್ಕಾರ ಮಾಡುತ್ತಿದೆ. ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಬೇರೆ ಕೆಲಸಗಳಿಗೆ ಬಳಸಿಕೊಳ್ಳುವ ಪ್ರವೃತ್ತಿ ಹೆಚ್ಚಾಗಿದೆ.

ಶಿಕ್ಷಕರಿಗೆ ಉಪಯೋಗವಿಲ್ಲದ ತರಬೇತಿಗಳನ್ನು ಇಲಾಖೆ ಹಮ್ಮಿಕೊಳ್ಳುತ್ತಿದೆ. ಬಹುತೇಕ ಶಾಲೆಗಳಲ್ಲಿ ಪಾಠ, ಪ್ರವಚನಗಳೇ ನಡೆಯುವುದಿಲ್ಲ. ಬೇಸತ್ತ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಿದ್ದಾರೆ.

ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದಕ್ಕೆ ಮೇಲಿನ ಸಂಗತಿಗಳು ಕಾರಣ. ಆದರೆ ಸರ್ಕಾರ ತನ್ನದೇ ಕನ್ನಡ ಶಾಲೆಗಳ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ.

ಖಾಸಗಿ ಶಾಲೆಗಳ ಶಿಕ್ಷಕರಿಗೆ ಪಾಠ ಹೇಳುವ ಕೆಲಸ ಬಿಟ್ಟರೆ ಬೇರೆ ಕೆಲಸಗಳಿಲ್ಲ. ಅವರಿಗೆ ಯಾವುದೇ ತರಬೇತಿಗಳಿಲ್ಲ. ಆಡಳಿತ ಮಂಡಳಿಯವರ ಮುತುವರ್ಜಿಯಿಂದ ಶಾಲೆಗಳು ಉತ್ತಮವಾಗಿ ನಡೆಯುತ್ತವೆ ಎಂಬ ಅಂಶಗಳನ್ನು ಶಿಕ್ಷಣ ಸಚಿವರು ಗಮನಿಸಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.