ನೂತನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಮಂತ್ರಿಮಂಡಲದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ ಕೋಟ ಶ್ರೀನಿವಾಸ್ ಪೂಜಾರಿ ಅವರು ಸಾಹಿತಿ ಡಾ. ಶಿವರಾಮ ಕಾರಂತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದುದು ವಿಶೇಷತೆ ಎನಿಸಿತು.
ದೇವರ, ದಿಂಡರ, ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅರ್ಥಹೀನ ಆಡಳಿತಗಳನ್ನು ನೀಡಿ ಕುಖ್ಯಾತರಾದ ರಾಜಕಾರಣಿಗಳ ಮಧ್ಯೆ ನೂತನ ಮಂತ್ರಿ ಮಂಡಲದಲ್ಲಿ ಒಬ್ಬ ಸಾಹಿತಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರ ಬಗ್ಗೆ ಗೌರವ ಮೂಡಿತು. ಅವರ ಈ ಆದರ್ಶ ಅನುಕರಣೀಯ. ಅನುಸರಣೀಯ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.