ADVERTISEMENT

ಶುಲ್ಕ ನಿಯಂತ್ರಿಸಿ

​ಪ್ರಜಾವಾಣಿ ವಾರ್ತೆ
Published 7 ಮೇ 2018, 19:30 IST
Last Updated 7 ಮೇ 2018, 19:30 IST

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇತ್ತೀಚೆ ಗಷ್ಟೆ ಪ್ರಕಟವಾಗಿದೆ. ಬಡ ಕುಟುಂಬಗಳಿಂದ ಬಂದ ಅನೇಕ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವ ಬಗ್ಗೆ ವರದಿಗಳು ಪ್ರಕಟವಾಗಿವೆ. ಕಷ್ಟದಲ್ಲೂ ಸಾಧನೆ ಮಾಡಿದ ವಿದ್ಯಾರ್ಥಿಗಳು ಅಭಿನಂದನಾರ್ಹರು.

ಆದರೆ ಇಂಥ ಅನೇಕ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಅತಂತ್ರ ಸ್ಥಿತಿಯಲ್ಲಿರುವುದೂ ಸತ್ಯ. ಖಾಸಗಿ ಸಂಸ್ಥೆಗಳು ವಿಧಿಸುವ ದುಬಾರಿ ಶುಲ್ಕ ಹಾಗೂ ಡೊನೇಷನ್‌ ಕೊಡಲಾಗದೆ ಇಂಥ ಬಡ ವಿದ್ಯಾರ್ಥಿಗಳು ಶಿಕ್ಷಣ ಮುಂದುವರಿಸಬೇಕೇ– ಬೇಡವೇ ಎಂಬ ಗೊಂದಲದಲ್ಲಿದ್ದಾರೆ. ಶಿಕ್ಷಣ ಇಂದು ವ್ಯಾಪಾರವಾಗಿರುವುದರಿಂದ ಬಡವರಿಗೆ ನಿಲುಕದಂತಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕಕ್ಕೆ ಕಡಿವಾಣ ಹಾಕುವ ವ್ಯವಸ್ಥೆ ಆಗಬೇಕು. ಶುಲ್ಕಕ್ಕೆ ಸಂಬಂಧಿಸಿದಂತೆ ಸರ್ಕಾರ ಕಾನೂನನ್ನೂ ರೂಪಿಸಬೇಕು. ಆ ಮೂಲಕ ಬಡ ವಿಧ್ಯಾರ್ಥಿಗಳಿಗೂ ಉನ್ನತ ಶಿಕ್ಷಣ ದಕ್ಕುವಂತೆ ಮಾಡಬೇಕು.

ADVERTISEMENT

-ಮೌಲಾಲಿ ಕೆ. ಬೋರಗಿ, ಸಿಂದಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.