
ಪ್ರಜಾವಾಣಿ ವಾರ್ತೆಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿರುವಂತಹ ಪ್ರಖರ ಬರದ ಪರಿಸ್ಥಿತಿ ಚಾಮರಾಜನಗರ ಜಿಲ್ಲೆಯಲ್ಲೂ ಇದೆ. ಆದರೆ ಸರ್ಕಾರ ಚಾಮರಾಜನಗರ ಜಿಲ್ಲೆಯನ್ನು ಸಂಪೂರ್ಣವಾಗಿ ಉಪೇಕ್ಷಿಸಿದೆ. ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿನ ಕೊರತೆಯಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿಯೇ ಹತ್ತಾರು ಗೋವುಗಳು,ಇನ್ನಿತರ ಪ್ರಾಣಿಗಳು ಸತ್ತಿವೆ.
ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಪ್ರತಿಪಾದಿಸುವ ಬಿಜೆಪಿ ಸರ್ಕಾರ ನೀರು, ಮೇವಿನ ಕೊರತೆಯಿಂದ ದನಕರುಗಳು ಸಾಯದಂತೆ ತಡೆಯುವ ಬಗ್ಗೆ ಕಿಂಚಿತ್ತೂ ಗಮನ ಹರಿಸುತ್ತಿಲ್ಲ. ಮುಖ್ಯಮಂತ್ರಿಗಳು ಒಮ್ಮೆ ಚಾಮರಾಜ ನಗರಕ್ಕೆ ಬಂದು ಪರಿಸ್ಥಿತಿಯ ಅವಲೋಕನ ಮಾಡಬೇಕು ಎಂದು ಜಿಲ್ಲೆಯ ಜನರ ಪರವಾಗಿ ಬಿನ್ನವಿಸಿಕೊಳ್ಳುತ್ತೇನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.