ರಾಜ್ಯ ಸರ್ಕಾರ ಚಲನ ಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ವರ್ಷವೂ ಜನರು ನೋಡದ ಕೆಲ ಸಿನಿಮಾಗಳಿಗೆ ಪ್ರಶಸ್ತಿ ಬಂದಿವೆ. ಇಂತಹ ಚಿತ್ರಗಳಿಗೆ ಸರ್ಕಾರ ಪ್ರಶಸ್ತಿ ಕೊಡುವ ಬದಲು ಅವುಗಳ ಪ್ರದರ್ಶನಕ್ಕೆ ಸೂಕ್ತವಾದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಯೋಚಿಸಬೇಕು.
ಬೆಂಗಳೂರಿನಲ್ಲಿ ಎರಡು ಮತ್ತು ಕಂದಾಯ ವಿಭಾಗಕ್ಕೆ ಒಂದೊಂದರಂತೆ ಚಿತ್ರ ಮಂದಿರಗಳನ್ನು ನಿರ್ಮಿಸಿ ಅಲ್ಲಿ ವರ್ಷವಿಡೀ ಪ್ರಶಸ್ತಿ ಪುರಸ್ಕೃತ ಮತ್ತು ಹೊಸ ಅಲೆಯ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ಕೊಡಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.