ADVERTISEMENT

ಸೀಟು ಲಭ್ಯತೆ: ಅಂಚೆ ಮೂಲಕವೂ ತಿಳಿಸಲಿ!

​ಪ್ರಜಾವಾಣಿ ವಾರ್ತೆ
Published 17 ಜುಲೈ 2012, 19:30 IST
Last Updated 17 ಜುಲೈ 2012, 19:30 IST

ಈ ಬಾರಿಯ ಸಿಇಟಿ ಕೌನ್ಸೆಲಿಂಗ್‌ನ ಎಲ್ಲಾ ಪ್ರಕ್ರಿಯೆ ಆನ್‌ಲೈನ್ ಮೂಲಕ ನಡೆಯಲಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗುವ ಸಂಭವವಿದೆ. 

ತಾಂತ್ರಿಕ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಬಯಸಿದ ಕೋರ್ಸ್‌ಗಳ ಆಯ್ಕೆಗೆ ಅನುಗುಣವಾಗಿ ಜುಲೈ 23ರಿಂದ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದ್ದು 25ರಂದು ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಯಾವ ಕಾಲೇಜಿನಲ್ಲಿ ಪ್ರವೇಶ ಸಿಕ್ಕಿದೆ ಎಂಬುದು ಅವರು ಈ ಮೊದಲೇ ನಮೂದಿಸಿದ ದೂರವಾಣಿ ಸಂಖ್ಯೆ, ಇ-ಮೇಲ್ ಐಡಿಗೆ ಸಂದೇಶ ಬರುತ್ತದೆ. ಸಾವಿರಾರು ಗ್ರಾಮೀಣ ಅಭ್ಯರ್ಥಿಗಳು ಇ-ಮೇಲ್ ಐಡಿ ಹೊಂದಿರುವುದಿಲ್ಲ.

ಅಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ದೂರವಾಣಿ ಸಂಪರ್ಕ ಜಾಲ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಸಂದೇಶ ತಲುಪದೇ ಇರಬಹುದು. ಇದರಿಂದ ವಿದ್ಯಾರ್ಥಿಗಳು ಪ್ರವೇಶಾವಕಾಶದಿಂದ ವಂಚಿತರಾಗುವ ಸಾಧ್ಯತೆ ಇದೆ.
 
ಆದ್ದರಿಂದ  ದೂರವಾಣಿ,  ಇ-ಮೇಲ್‌ನಲ್ಲಿ ಸೀಟು ಹಂಚಿಕೆ ಬಗ್ಗೆ ತಿಳಿಸುವುದರ ಜೊತೆಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಪೀಡ್‌ಪೋಸ್ಟ್ ಮೂಲಕ ಪ್ರವೇಶ ಲಭ್ಯತೆ ಬಗ್ಗೆ ಮಾಹಿತಿ ನೀಡಬೇಕೆಂದು ಕೋರುತ್ತೇನೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.