ADVERTISEMENT

ಸ್ಥೈರ್ಯ ಕುಗ್ಗಿಸಿದ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2012, 19:30 IST
Last Updated 25 ಮಾರ್ಚ್ 2012, 19:30 IST

ಇತ್ತೀಚೆಗೆ ಬೆಂಗಳೂರಿನ ಸಿಟಿ ಕೋರ್ಟ್ ಆವರಣದಲ್ಲಿ ಮಾಧ್ಯಮ ಸಿಬ್ಬಂದಿ, ವಕೀಲರು ಮತ್ತು ಪೊಲೀಸರ ನಡುವೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಡಿ.ಸಿ.ಪಿ. ರಮೇಶ್ ಮತ್ತು ಜಿತೇಂದ್ರನಾಥ್ ಅವರನ್ನು ವರ್ಗಾವಣೆ ಮಾಡಿದ ಕ್ರಮ ರಾಜ್ಯದ ಜನರಿಗೆ ಆಶ್ಚರ್ಯವನ್ನುಂಟು ಮಾಡಿದೆ. ಜಿ. ರಮೇಶ್ ಅವರು ಸ್ವತಃ ಕಲ್ಲೇಟಿಗೆ ಗುರಿಯಾಗಿ ಆಸ್ಪತ್ರೆ ಸೇರಿದ್ದರು. ಆನಂತರವೇ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಅದರಿಂದಾಗಿ ಪರಿಸ್ಥಿತಿ ಹತೋಟಿಗೆ ಬಂತು.ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ಬಲಿ ಪಶುಗಳನ್ನಾಗಿ ಮಾಡಿದೆ. ಇಂತಹ ಕ್ರಮಗಳಿಂದ ಪೊಲೀಸರು ನೈತಿಕ ಸ್ಥೈರ್ಯ ಕಳೆದುಕೊಳ್ಳುತ್ತಾರೆ. ವರ್ಗಾವಣೆ ನಿರ್ಧಾರವನ್ನು ಸರ್ಕಾರ ಮರು ಪರಿಶೀಲಿಸಬೇಕು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.