ADVERTISEMENT

ಹಿರಿಯ ನಾಗರಿಕರಿಗೆ ರಿಯಾಯಿತಿ

ಕುಂದು ಕೊರತೆ

ಎಂ.ವೆಂಕಟಪ್ಪ
Published 12 ಅಕ್ಟೋಬರ್ 2015, 19:30 IST
Last Updated 12 ಅಕ್ಟೋಬರ್ 2015, 19:30 IST

ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಹಾಕಿಕೊಂಡಿರುವ ಯೋಜನೆಗಳಲ್ಲಿ ತಿಳಿಸಿರುವಂತೆ ಕರ್ನಾಟಕ ರಾಜ್ಯದ ಎಲ್ಲಾ ಸಾರಿಗೆ ಬಸ್ಸುಗಳಲ್ಲಿ 60 ವರ್ಷ ಹಾಗೂ ಮೇಲ್ಪಟ್ಟ ವಯೋಮಾನದ ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ಶೇ 25ರಷ್ಟು ರಿಯಾಯಿತಿಯನ್ನು ಒದಗಿಸಲಾಗುತ್ತಿದೆ ಎಂದು ಪ್ರಕಟಿಸಲಾಗಿದೆ. ಹಾಗಿದ್ದರೆ ವಿಮಾನ ನಿಲ್ದಾಣಕ್ಕೆ ಹೋಗಿಬರುವ ವಾಹನಗಳು ಬಿ.ಎಂ.ಟಿ.ಸಿ. ಅಲ್ಲವೆ? ಅದರಲ್ಲೇಕೆ ರಿಯಾಯಿತಿ ನೀಡುತ್ತಿಲ್ಲ? ನಗರ ಸಾರಿಗೆ ಮತ್ತು ಉಸ್ತುವಾರಿ ಸಚಿವರು ಇತ್ತ ಗಮನ ಹರಿಸಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.