ADVERTISEMENT

ಹೆಚ್ಚುತ್ತಿರುವ ಕೊಲೆ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2012, 19:30 IST
Last Updated 21 ಫೆಬ್ರುವರಿ 2012, 19:30 IST

ಇತ್ತೀಚೆಗೆ ಬೆಂಗಳೂರಿನಲ್ಲಿ ಒಂಟಿ ಮಹಿಳೆಯರ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹಗಲು ಹೊತ್ತು ಮಹಿಳೆಯರು ಒಂಟಿಯಾಗಿರುವ ಸಂದರ್ಭವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ದುಷ್ಕರ್ಮಿಗಳ ಸಂಖ್ಯೆ ಹೆಚ್ಚುತ್ತಿವೆ.

ಪರಿಣಾಮವಾಗಿ ಮಹಿಳೆಯರು ಮನೆಯಲ್ಲಿ ನೆಮ್ಮದಿಯಾಗಿ ಉಸಿರಾಡಲೂ ಭಯಪಡುವಂಥ ವಾತಾವರಣ ನಿರ್ಮಾಣವಾಗುತ್ತಿದೆ.

ಇದರಿಂದಾಗಿ ಬೆಂಗಳೂರು ನಗರದಲ್ಲಿ ಜನಜೀವನ ಎಷ್ಟು ಸುರಕ್ಷಿತ ಎಂದು ಪ್ರಶ್ನಿಸುವಂತಾಗಿದೆ. ಇಂತಹ ದುಷ್ಕರ್ಮಿಗಳನ್ನು ನಿಗ್ರಹಿಸಲು ಪೊಲೀಸ್ ಸಿಬ್ಬಂದಿ ಹೊಯ್ಸಳ ವಾಹನದಲ್ಲಿ ಆಗಾಗ ರಸ್ತೆಗಳಲ್ಲಿ ಅಡ್ಡಾಡುವುದನ್ನು ಹೆಚ್ಚಿಸಬೇಕು ಮತ್ತು ಜನಮನದಲ್ಲಿ ಅಭಯ ಮೂಡಿಸುವಂತಹ ವಾತಾವರಣ ಸೃಷ್ಟಿಯಾಗಬೇಕು.

ಹಾಗೆಯೇ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುವುದನ್ನು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ ಈ ಕಾರ್ಯದಲ್ಲಿ ಅವರಿಗೆ ಸಹಕಾರ ನೀಡುವಂಥಾ ಕಾರ್ಯವನ್ನು ಸಾರ್ವಜನಿಕರೂ ಮಾಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.