ADVERTISEMENT

ಹಿರಿಯರಿಗೆ ಸೌಲಭ್ಯ ಕೊಡಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 19:30 IST
Last Updated 7 ಫೆಬ್ರುವರಿ 2018, 19:30 IST

ರಾಜ್ಯ ರಸ್ತೆ ಸಾರಿಗೆ ನಿಗಮಗಳ ವೋಲ್ವೊ ಮತ್ತು ಸ್ಲೀಪರ್ ಬಸ್ಸುಗಳ ಪ್ರಯಾಣ ದರದಲ್ಲಿ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡುವಂತೆ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಾರಿಗೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖ್ಯಮಂತ್ರಿಗಳಿಗೆ ಆರು ವರ್ಷಗಳಿಂದ ಮನವಿ ಸಲ್ಲಿಸುತ್ತಲೇ ಇದ್ದೇವೆ. ಯಾರಿಂದಲೂ ಇದಕ್ಕೆ ಸಕಾರಾತ್ಮಕ ಸ್ಪಂದನ ಲಭಿಸುತ್ತಿಲ್ಲ.

ವಯಸ್ಸಾದವರಿಗೆ ಸಾಮಾನ್ಯ ಬಸ್‌ಗಳಲ್ಲಿ ದೂರದ ಸ್ಥಳಗಳಿಗೆ ಪ್ರಯಾಣಿಸಲು ಕಷ್ಟವಾಗುತ್ತದೆ. ಅವರಿಗೆ ವೋಲ್ವೊ ಹಾಗೂ ಸ್ಲೀಪರ್ ಬಸ್ಸುಗಳಲ್ಲಿ ರಿಯಾಯಿತಿ ನೀಡಿದಲ್ಲಿ, ದೂರದಲ್ಲಿರುವ ತಮ್ಮ ಕುಟುಂಬದ ಸದಸ್ಯರು ಹಾಗೂ ಬಂಧುಗಳನ್ನು ಆಗಾಗ ಭೇಟಿಮಾಡಿ ಬರಬಹುದು. ‘ಹಿರಿಯ ನಾಗರಿಕರು ಸಮಾಜದ ಅಮೂಲ್ಯ ಆಸ್ತಿ, ಅವರನ್ನು ಗೌರವಿಸಿ... ರಕ್ಷಿಸಿ’ ಎಂಬ ಸರ್ಕಾರದ ಘೋಷಣೆ ಬರಿಯ ಘೋಷಣೆಯಾಗಿ ಉಳಿಯಬಾರದು.

ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಹಿರಿಯ ನಾಗರಿಕರಿಗೆ ಕೆಲವು ಸೌಲಭ್ಯಗಳನ್ನು ಘೋಷಿಸಿದೆ. ರಾಜ್ಯ ಸರ್ಕಾರವೂ ಮುಂದಿನ ಬಜೆಟ್‌ನಲ್ಲಿ ಹಿರಿಯ ನಾಗರಿಕರಿಗೆ ವೋಲ್ವೊ ಮತ್ತು ಸ್ಲೀಪರ್‌ ಬಸ್‌ಗಳಲ್ಲಿ ರಿಯಾಯಿತಿಯನ್ನು ಘೋಷಿಸಲಿ.

ADVERTISEMENT

ಬಿ. ಜಯರಾಜ್, ಉಡುಪಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.