ADVERTISEMENT

ಕೃಷಿ ಉದ್ಯಮವಾಗಲಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 19:30 IST
Last Updated 7 ಫೆಬ್ರುವರಿ 2018, 19:30 IST

2018–19ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಹಣ ಒದಗಿಸಲಾಗಿದೆ. ಪ್ರತಿ ವರ್ಷವೂ ಕೃಷಿ ಕ್ಷೇತ್ರಕ್ಕೆ ಕೊಡುವ ಹಣದ ಪ್ರಮಾಣ ಹೆಚ್ಚುತ್ತಿದ್ದರೂ ರೈತರ ಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ. ಕೃಷಿಯನ್ನು ‘ಉದ್ಯಮ’ ಎಂದು ಪರಿಗಣಿಸಿ ಅದಕ್ಕೆ ಅನುಗುಣವಾದ ಯೋಜನೆಗಳನ್ನು ರೂಪಿಸಿದರೆ ಮಾತ್ರ ರೈತರ ಸಮಸ್ಯೆಗಳಿಗೆ ಪರಿಹಾರ ಸಾಧ್ಯ.

ಹಲವು ರಾಷ್ಟ್ರಗಳಲ್ಲಿ ಈಗಾಗಲೇ ಕೃಷಿ ಉದ್ಯಮವಾಗಿದೆ. ಕೃಷಿಯ ಹೆಸರಿನಲ್ಲಿ ಕೋಟಿ ಕೋಟಿ ಹಣ ವೆಚ್ಚ ಮಾಡುವ ನಮ್ಮ ಸರ್ಕಾರಗಳು, ಅದನ್ನು ಒಂದು ಉದ್ಯಮವಾಗಿ ನೋಡಲು ಯಾಕೆ ಹಿಂದೇಟು ಹಾಕುತ್ತಿವೆ ಎನ್ನುವುದು ಅರ್ಥವಾಗುತ್ತಿಲ್ಲ.
ಕೃಷಿಗೆ ಉದ್ದಿಮೆಯ ದರ್ಜೆ ನೀಡಿದರೆ ಯಾವ ಜಿಲ್ಲೆಯಲ್ಲಿ ಯಾವ ಬೆಳೆ ಬೆಳೆಯಬೇಕು ಎಂಬುದು ಮೊದಲೇ ನಿರ್ಧಾರವಾಗುತ್ತದೆ. ವಿವಿಧ ಕಂಪನಿಗಳು ಕೃಷಿ ಕ್ಷೇತ್ರಕ್ಕೆ ಬರುತ್ತವೆ. ರೈತರು ಅವುಗಳ ಅಗತ್ಯಗಳಿಗೆ ಅನುಗುಣವಾಗಿ, ವೈಜ್ಞಾನಿಕ ಪದ್ಧತಿ ಅಳವಡಿಸಿ ಕೃಷಿ ಮಾಡುತ್ತಾರೆ. ತಾವು ಬೆಳೆದ ಬೆಳೆಗೆ ತಾವೇ ಬೆಲೆ ನಿರ್ಧರಿಸಿ, ಮಧ್ಯವರ್ತಿಗಳ ಸಹಾಯ ಇಲ್ಲದೆ ನೇರವಾಗಿ ಮಾರಾಟ ಮಾಡುತ್ತಾರೆ. ಇದರಿಂದ ಕೃಷಿಯ ಜೊತೆಜೊತೆಗೆ ಉದ್ಯೋಗಾವಕಾಶಗಳೂ ಹೆಚ್ಚುತ್ತವೆ. ಭಾರತದಲ್ಲಿ ಈ ವ್ಯವಸ್ಥೆ ಜಾರಿಗೆ ತರಲು ಕೆಲವು ತೊಡಕುಗಳಿರುವುದು ನಿಜ. ಆದರೆ ಸರ್ಕಾರ ಪ್ರಯತ್ನಿಸಿದರೆ ಹಂತ ಹಂತವಾಗಿ ಜಾರಿಗೊಳಿಸುವುದು ಅಸಾಧ್ಯವಲ್ಲ.

-ಬಿ. ವೆಂಕಟೇಶ್‌ನಾಯ್ಕ, ತುಮಕೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.