ADVERTISEMENT

ಅಧಿಕಾರಿಗಳ ಸಹಕಾರವಿರಲಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2022, 20:15 IST
Last Updated 28 ಜೂನ್ 2022, 20:15 IST

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ‘ಆಯುಷ್ಮಾನ್ ಭಾರತ’ವೂ ಒಂದು. ಇದು ಒಂದು ಉಪಯುಕ್ತ ಯೋಜನೆಯಾಗಿದೆ. ಸಹಸ್ರಾರು ಬಡವರು, ಅಂಗವಿಕಲರು ಇದರಿಂದ ಪ್ರಯೋಜನ ಪಡೆಯಬಹುದಾಗಿದ್ದರೂ ಈ ಯೋಜನೆಯ ಫಲವನ್ನು ಎಲ್ಲ ಆಸ್ಪತ್ರೆಗಳಿಗೂ ತಲುಪಿಸುವಲ್ಲಿ ಅಧಿಕಾರಿಗಳು ಸಹಕರಿಸುತ್ತಿಲ್ಲ ಎಂಬ ಆರೋಪವಿದೆ.

ಸರ್ಕಾರದ ಯೋಜನೆಗಳನ್ನು ಸರಿಯಾಗಿ ಚಾಲನೆಯಲ್ಲಿಡುವ ಕೆಲಸವನ್ನು ಅಧಿಕಾರಿಗಳು ವ್ಯವಸ್ಥಿತವಾಗಿ ಮಾಡಬೇಕಾದ ಅಗತ್ಯವಿದೆ.

-ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.