ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಶಾಲೆಗಳು ‘ಬ್ಯಾಗ್‌ರಹಿತ ದಿನ’ ಯೋಜನೆಯನ್ನು ಜಾರಿ ಮಾಡುವ ಮೂಲಕ ದೇಶದ ಗಮನ ಸೆಳೆದಿವೆ. ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಈ ಕ್ರಮವನ್ನು ಜಾರಿಗೆ ತಂದರೆ ಮಕ್ಕಳ ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಸಹಕಾರಿಯಾದೀತು.
ಪುಸ್ತಕದ ಹೊರೆ ಇಲ್ಲದೆ ಶಾಲೆಗೆ ಹೋಗುವುದು ಮಕ್ಕಳಿಗೆ ಪ್ರವಾಸ ಹೋದ ಅನುಭವ ನೀಡುತ್ತದೆ. ಓದು, ಬರಹದ ಚಿಂತೆ ಇಲ್ಲದೆ ಮನಸ್ಸು ಹಗುರವಾಗಿರುತ್ತದೆ. ಈ ವಿಧಾನದಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿ ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶ ಲಭಿಸುತ್ತದೆ. ಪಠ್ಯೇತರ ಚಟುವಟಿಕೆಗಳಿಗೆ ಉತ್ತೇಜನ ಲಭಿಸುತ್ತದೆ. ಮಕ್ಕಳ ಶೈಕ್ಷಣಿಕ ಏಳಿಗೆಯ ಮೇಲೂ ಇದು ಒಳ್ಳೆಯ ಪರಿಣಾಮ ಉಂಟುಮಾಡಬಲ್ಲದು.
–ಎಂ.ಎಸ್.ಉಷಾ ಪ್ರಕಾಶ್, ಮೈಸೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.