ADVERTISEMENT

ಪ್ರಶಸ್ತಿಗೆ ಮಾನದಂಡ ಪಾಲನೆಯಾಗಲಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 19:30 IST
Last Updated 8 ಏಪ್ರಿಲ್ 2021, 19:30 IST

ಎಲೆಮರೆಯ ಕಾಯಿಯಂತೆ ಕನ್ನಡ ನಾಡು ನುಡಿಗಾಗಿ ಸೇವೆ ಸಲ್ಲಿಸುತ್ತಿರುವವರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದಂತಹ ವ್ಯಕ್ತಿಗಳಿಗೆ ನಾಡೋಜ ಪ್ರಶಸ್ತಿಯನ್ನು ನೀಡುವುದು ಸೂಕ್ತ. ರಾಜಕಾರಣಿಗಳಿಗೆ ಹಾಗೂ ಆಡಳಿತಾರೂಢ ಪಕ್ಷದೊಂದಿಗೆ ನಂಟು ಹೊಂದಿದ್ದಾರೆ ಎಂಬ ಕಾರಣಕ್ಕೆ ಉದ್ಯಮಿಗಳಿಗೆ ಈ ಪ್ರಶಸ್ತಿಯನ್ನು ನೀಡುವುದು ಸೂಕ್ತವಲ್ಲ.

ಪ್ರಶಸ್ತಿಗೆ ಆಯ್ಕೆ ಮಾಡಲು ಸರಿಯಾದ ಮಾನದಂಡಗಳನ್ನು ಅಳವಡಿಸಿಕೊಂಡು, ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ಈ ಸಮಯದಲ್ಲಿ ಯಾವುದೇ ರಾಜಕೀಯಕ್ಕೆ ಆಸ್ಪದ ಕೊಡದೆ ಆಯ್ಕೆಯ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದು ಪ್ರಶಸ್ತಿ ಪ್ರದಾನ ಮಾಡುವ ವಿಶ್ವವಿದ್ಯಾಲಯ ಹಾಗೂ ಸರ್ಕಾರದ ಜವಾಬ್ದಾರಿಯಾಗಿರುತ್ತದೆ.

–ವಿನಾಯಕ ಎಂ.ಎಂ., ಹಂಪಸಾಗರ, ಹಗರಿಬೊಮ್ಮನಹಳ್ಳಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.