ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದ ವಿಧಾನಮಂಡಲದ ಅಧಿವೇಶನವನ್ನು ಮೂರು ವರ್ಷಗಳಿಂದ ವಿವಿಧ ಕಾರಣ ನೀಡಿ ಸ್ಥಗಿತಗೊಳಿಸಲಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಕಟ್ಟಡ ಈಗ ಹೆಸರಿಗಷ್ಟೇ ಎಂಬಂತಾಗಿರುವುದು ದುರದೃಷ್ಟಕರ.
ಈ ವರ್ಷವಾದರೂ ಸುವರ್ಣಸೌಧದಲ್ಲಿ ಅಧಿವೇಶನ ನಡೆಸಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ. ವಿಶೇಷವಾಗಿ, ಬೆಳಗಾವಿ ಗಡಿ ಜಿಲ್ಲೆಯಾಗಿರುವುದರಿಂದ ಮಹಾರಾಷ್ಟ್ರ ಪದೇಪದೇ ಕ್ಯಾತೆ ತೆಗೆಯುತ್ತಿದೆ. ಹೀಗಾಗಿ ಕನ್ನಡಿಗರ ಒಗ್ಗಟ್ಟಿನ ಶಕ್ತಿ ಪ್ರದರ್ಶನದ ದೃಷ್ಟಿಯಿಂದಲೂ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದು ಸೂಕ್ತ.
– ರಾಕೇಶ ಆಲಬಾಳ,ಅಥಣಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.