ADVERTISEMENT

‘ಭಾರತ್ ಜೋಡೊ’: ಸದವಕಾಶವಾಗಲಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2022, 19:31 IST
Last Updated 9 ಅಕ್ಟೋಬರ್ 2022, 19:31 IST

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೈಗೊಂಡಿರುವ ‘ಭಾರತ್ ಜೋಡೊ’ ಯಾತ್ರೆಗೆ ರಾಜ್ಯದಾದ್ಯಂತ ಉತ್ತಮ ಬೆಂಬಲ ಸಿಕ್ಕಿರುವುದು ಆ ಪಕ್ಷಕ್ಕೆ ಸ್ವಲ್ಪಮಟ್ಟಿಗೆ ಸಮಾಧಾನ ತರುವ ವಿಷಯವಾ ಗಬಹುದು. ರಾಹುಲ್ ಹೋದೆಡೆಯೆಲ್ಲಾ ಜನರೊಡನೆ ಬೆರೆತು ಅವರ ಕಷ್ಟ ಸುಖಗಳಿಗೆ ಧ್ವನಿಯಾಗುತ್ತಿದ್ದಾರೆ. ಒಂದು ಗ್ರಾಮದಲ್ಲಿ ಮಳೆ ಬೀಳುತ್ತಿದ್ದರೂ ವಿಚಲಿತರಾಗದೆ ಸಭಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅವರು ವಹಿಸಿಕೊಳ್ಳಲು ನಿರಾಕರಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಹುಲ್ ಅವರಲ್ಲಿ ಸ್ವಲ್ಪ ಸ್ವಲ್ಪವಾಗಿ ರಾಜಕೀಯ ಪ್ರಬುದ್ಧತೆ ಮತ್ತು ನಾಯಕತ್ವದ ಲಕ್ಷಣಗಳು ಗೋಚರಿಸಲು ಪ್ರಾರಂಭಿಸಿವೆ.

ರಾಹುಲ್ ಅವರಿಗೆ ನೇರವಾಗಿ ಜನರೊಡನೆ ಬೆರೆಯುವ ಹಾಗೂ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುವ ಅವಕಾಶ ಸಿಕ್ಕಿದೆ. ಒಳ್ಳೆಯ ನಾಯಕನಾಗಿ ಬೆಳೆಯಲು ಇದು ಅವರಿಗೆ ಸಹಕಾರಿ. ಇದನ್ನು ಅವರು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಲಿ.

⇒ಕೆ.ವಿ.ವಾಸು,ಮೈಸೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.