ADVERTISEMENT

ಸೋರಿ ಹೋಗುವ ಅನುದಾನಕ್ಕೆ ಕಡಿವಾಣ ಇಲ್ಲವೇ?

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 19:45 IST
Last Updated 20 ಜುಲೈ 2020, 19:45 IST

ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೈರ್ಮಲ್ಯ ಯೋಜನೆಗಳಿಗಾಗಿ 15ನೇ ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ₹ 804 ಕೋಟಿ ಅನುದಾನ ಬಿಡುಗಡೆ ಮಾಡಿರುವುದು ಸಂತಸದ ವಿಚಾರ. 6,068 ಗ್ರಾಮ ಪಂಚಾಯಿತಿಗಳನ್ನು ಹೊಂದಿರುವ ರಾಜ್ಯಕ್ಕೆ ಇದೇನೂ ದೊಡ್ಡ ಮೊತ್ತವಲ್ಲ. ಪ್ರತೀ ಪಂಚಾಯಿತಿಗೆ ದೊರೆಯುವ ಅನುದಾನದಲ್ಲಿ ಸೋರಿ ಹೋಗುವ ಮೊತ್ತವೇ ಹೆಚ್ಚು. ಪಂಚಾಯಿತಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಇಂತಹ ಅನುದಾನಗಳನ್ನು ಇನ್ನಾದರೂ ನ್ಯಾಯಯುತವಾಗಿ ಬಳಸಿಕೊಳ್ಳಬೇಕು.

– ಶ್ವೇತಾ ಎನ್. ಸೊರಬ,ಶಿವಮೊಗ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT