ADVERTISEMENT

ಸ್ಪರ್ಧಾತ್ಮಕ ಪರೀಕ್ಷೆ ಮುಂದೂಡಿ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 19:30 IST
Last Updated 2 ಜುಲೈ 2020, 19:30 IST

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಅಧಿಕವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೆ.ಸೆಟ್, ಟಿ.ಇ.ಟಿ.ಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ.

‌ಹಾಸ್ಟೆಲ್, ಬಾಡಿಗೆ ರೂಮ್‌ಗಳಲ್ಲಿದ್ದ ಅಭ್ಯರ್ಥಿಗಳು, ಕೊರೊನಾದಿಂದ ಕಾಲೇಜುಗಳಿಗೆ ರಜೆ ಇರುವುದರಿಂದ ತಮ್ಮ ಊರುಗಳಿಗೆ ಮರಳಿದ್ದಾರೆ.

ಈಗ ದೂರದ ಊರುಗಳಿಂದ ಜಿಲ್ಲಾ ಕೇಂದ್ರಗಳಿಗೆ ಬಂದು ಪರೀಕ್ಷೆ ಬರೆಯುವುದು ಅವರಿಗೆ ಕಷ್ಟವಾಗುತ್ತದೆ. ಹೀಗಾಗಿ, ಕಾಲೇಜು, ವಿಶ್ವವಿದ್ಯಾಲಯಗಳು ಪುನರಾರಂಭಗೊಂಡ ಬಳಿಕ ಪರೀಕ್ಷೆಗಳನ್ನು ನಡೆಸುವುದು ಒಳ್ಳೆಯದು.

ADVERTISEMENT

–ಮಹೇಶ್ ಕೆ.ಎಚ್., ಚಿಕ್ಕಮಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.